ಮೇ 16 - 17 : ಮಲ್ಲಾರು ರಾಣೆಕೇರಿಯ ಕೋಟೆ ಶ್ರೀ ಗಡು ಮಾರಿಯಮ್ಮ ಹಾಗೂ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಕಾಲಾವಧಿ ರಾಶಿ ಮಾರಿಪೂಜೆ
Posted On:
15-05-2023 10:33AM
ಕಾಪು : ಇಲ್ಲಿನ ಮಲ್ಲಾರು ರಾಣೆಕೇರಿಯ
ಕೋಟೆ ಶ್ರೀ ಗಡು ಮಾರಿಯಮ್ಮ ಹಾಗೂ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಕಾಲಾವಧಿ ರಾಶಿ ಮಾರಿಪೂಜೆಯು ಮೇ 16, ಮಂಗಳವಾರ ಹಾಗೂ ಮೇ 17, ಬುಧವಾರದಂದು ಜರಗಲಿದೆ.
ಮೇ 15, ಸೋಮವಾರದಂದು ಬೆಳಿಗ್ಗೆ ಗಂಟೆ
8ಕ್ಕೆ ಶ್ರೀ ಮಾರಿಯಮ್ಮ, ಶ್ರೀ ಉಚ್ಚಂಗಿ ಮತ್ತು ಶ್ರೀ ಚಾಮುಂಡೇಶ್ವರೀ ದೇವಿಗೆ ರಜತ ಮುಖ ಸಮರ್ಪಣೆ ನಡೆಯಲಿದೆ.
ಮೇ 16, ಮಂಗಳವಾರ ರಾತ್ರಿ ಗಂಟೆ 7ಕ್ಕೆ ಗಡುಮಾರಿಯಮ್ಮ ಭಜನಾ ಮಂಡಳಿಯವರಿಂದ
ಭಜನಾ ಕಾರ್ಯಕ್ರಮ, ರಾತ್ರಿ ಗಂಟೆ 8ಕ್ಕೆ ಪ್ರಸಿದ್ಧ ಭಜನಾ ಮಂಡಳಿಗಳಿಂದ ಕುಣಿತಾ ಭಜನಾ ಕಾರ್ಯಕ್ರಮ, ರಾತ್ರಿ ಗಂಟೆ 9ಕ್ಕೆ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಗಂಟೆ 12ಕ್ಕೆ ಮಹಾಪೂಜೆ, ಶ್ರೀ ದೇವಿಯ ದರ್ಶನ ಸೇವೆ ಹಾಗೂ ರಾಶಿ ಪೂಜೆ ಮಹೋತ್ಸವ ಜರಗಲಿದೆ.
ಮೇ 17, ಬುಧವಾರ ಬೆಳಿಗ್ಗೆ ಗಂಟೆ 6ಕ್ಕೆ
ಅರಮನೆ ಪೂಜೆ, ಮಧ್ಯಾಹ್ನ ಗಂಟೆ 12-30ಕ್ಕೆ ಅನ್ನಸಂತರ್ಪಣೆ, ಮಧ್ಯಾಹ್ನ ಗಂಟೆ 3ಕ್ಕೆ ಮಹಾ ಪೂಜೆ, ಶ್ರೀ ಮಾರಿಯಮ್ಮ ಹಾಗೂ ಚಾಮುಂಡೇಶ್ವರೀ ದೇವಿಯ ದರ್ಶನ ಸೇವೆ ನಂತರ ಪ್ರಸಾದ ವಿತರಣೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.