ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಪಡುಕುತ್ಯಾರು ಆನೆಗುಂದಿಶ್ರೀಗಳ ಪಟ್ಟಾಭಿಷೇಕ ವರ್ಧಂತಿ ಸಂಪನ್ನ ; ಪ್ರಶಸ್ತಿ ಪ್ರಧಾನ ; ಶೈಕ್ಷಣಿಕ ಸಾಧಕರಿಗೆ ಅಭಿನಂದನೆ

Posted On: 16-05-2023 02:17PM

ಕಾಪು : ನವ ಮಾದ್ಯಮ ಕಾಲದಲ್ಲಿ ಸಂಸ್ಕಾರಯುತ ಜೀವನ ನಡೆಸುವುದನ್ನು ಎಳೆಯ ಮಕ್ಕಳಿಗೆ ಕಲಿಸುವ ಪ್ರಯತ್ನ ನಡೆಯಬೇಕು. ಇದಕ್ಕಾಗಿ ಹೆತ್ತವರು ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರು ನುಡಿದರು. ಅವರು ಪಡುಕುತ್ಯಾರು ಮಹಾಸಂಸ್ಥಾನದ ಶ್ರೀ ಸರಸ್ವತೀ ಸತ್ಸಂಗ ಮಂದಿರದಲ್ಲಿ ತಮ್ಮ ಪಟ್ಟಾಭಿಷೇಕ ಮಹೋತ್ಸವದ 13ನೇ ವರ್ಷದ ವರ್ಧಂತ್ಯುತ್ಸವದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ವಿವಿಧ ವಿಭಾಗಗಳಲ್ಲಿ ಸಾಧಕರನ್ನು ಮಹಾಸಂಸ್ಥಾನದಿಂದ ಗುರುತಿಸುವ ಪ್ರಯತ್ನ ಮಾಡಲಾಗಿದೆ. ತಮ್ಮ ಕುಲಕಸುಬು ಮಾಡಿಕೊಂಡು ತೆರೆಮರೆಯಲ್ಲಿರುವ ಸಾಧಕರನ್ನೂ ಈ ಬಾರಿ ಗುರುತಿಸಿದ್ದೇವೆ. ಎಂದು ಅವರು ಸೇವಾ ವಲಯದಲ್ಲಿ ಮತ್ತು ಸಮಾಜಕ್ಕೆ ಸಲ್ಲಿಸಿದ ಸೇವೆಯ ಬಗ್ಗೆ ಮಾತನಾಡಿದರು.

ಸಭೆಯ ಅಧ್ಯಕ್ಷತೆಯನ್ನು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪ್ರತಿಷ್ಠಾನದ ಅಧ್ಯಕ್ಷ ವಿ. ಶ್ರೀಧರ ಆಚಾರ್ಯ ವಡೇರಹೋಬಳಿ ವಹಿಸಿದ್ದರು. ಮಹಾಸಂಸ್ಥಾನದ ವ್ಯಾಪ್ತಿಯಲ್ಲಿರುವ ಉತ್ತರ ಕನ್ನಡ, ಅವಿಭಜಿತ ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಯ ಶ್ರೀಕಾಳಿಕಾಂಬಾ ದೇವಸ್ಥಾನದ ಧರ್ಮದರ್ಶಿಗಳು ಸಮಾಜ ಸದಸ್ಯರಿಂದ ಸಂಗ್ರಹಿಸಿದ ಗುರುಕಾಣಿಕೆಯನ್ನು ವಾಡಿಕೆಯಂತೆ ಜಗದ್ಗುರುಗಳವರಿಗೆ ಫಲತಾಂಬೂಲಗಳೊಂದಿಗೆ ಸಮರ್ಪಿಸಿ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು. ಬೆಳಿಗ್ಗೆ ಜಗದ್ಗುರುಗಳವರಿಂದ ಕಟಪಾಡಿ ಶ್ರೀಮಹಾಸಂಸ್ಥಾನದಲ್ಲಿ ಶ್ರೀಕರಾರ್ಚಿತ ದೇವತಾ ಪೂಜೆ ಬಳಿಕ ಕಟಪಾಡಿಯಲ್ಲಿರುವ ಅನಂತಶ್ರೀ ವಿಭೂಷಿತ ನಾಗಧರ್ಮೇಂದ್ರ ಸರಸ್ವತೀ ಮಹಾಸ್ವಾಮಿಗಳವರ ವೃಂದಾವನದಲ್ಲಿ ಜಗದ್ಗುರುಗಳವರಿಂದ ಪೂಜೆ ನಡೆಯಲಿದೆ. ಬಳಿಕ ಪಡುಕುತ್ಯಾರಿನ ಶ್ರೀ ಸರಸ್ವತೀ ಯಾಗ ಶಾಲೆಯಲ್ಲಿ ಶ್ರೀ ವಿಶ್ವಕರ್ಮ ಯಜ್ಞ, ಶ್ರೀ ದಕ್ಷಿಣಾಮೂರ್ತಿ ಯಜ್ಞ, ಶ್ರೀ ರುದ್ರ ಯಜ್ಞ, ಸಾಮೂಹಿಕ ಶ್ರೀ ಚಂಡಿಕಾ ಯಾಗ ನಡೆಯಿತು. ಬಳಿಕ ಆನೆಗುಂದಿ ಪ್ರತಿಷ್ಠಾನದ ವತಿಯಿಂದ ಜಗದ್ಗುರುಗಳವರ ಪಾದಪೂಜೆ ನಡೆಯಿತು.

ಬೆಳಿಗ್ಗೆ ಜಗದ್ಗುರುಗಳವರಿಂದ ಕಟಪಾಡಿ ಶ್ರೀಮಹಾಸಂಸ್ಥಾನದಲ್ಲಿ ಶ್ರೀಕರಾರ್ಚಿತ ದೇವತಾ ಪೂಜೆ ಬಳಿಕ ಕಟಪಾಡಿಯಲ್ಲಿರುವ ಅನಂತಶ್ರೀ ವಿಭೂಷಿತ ನಾಗಧರ್ಮೇಂದ್ರ ಸರಸ್ವತೀ ಮಹಾಸ್ವಾಮಿಗಳವರ ವೃಂದಾವನದಲ್ಲಿ ಜಗದ್ಗುರುಗಳವರಿಂದ ಪೂಜೆ ನಡೆಯಲಿದೆ. ಬಳಿಕ ಪಡುಕುತ್ಯಾರಿನ ಶ್ರೀ ಸರಸ್ವತೀ ಯಾಗ ಶಾಲೆಯಲ್ಲಿ ಶ್ರೀ ವಿಶ್ವಕರ್ಮ ಯಜ್ಞ, ಶ್ರೀ ದಕ್ಷಿಣಾಮೂರ್ತಿ ಯಜ್ಞ, ಶ್ರೀ ರುದ್ರ ಯಜ್ಞ, ಸಾಮೂಹಿಕ ಶ್ರೀ ಚಂಡಿಕಾ ಯಾಗ ನಡೆಯಿತು. ಬಳಿಕ ಆನೆಗುಂದಿ ಪ್ರತಿಷ್ಠಾನದ ವತಿಯಿಂದ ಜಗದ್ಗುರುಗಳವರ ಪಾದಪೂಜೆ ನಡೆಯಿತು. ಪ್ರಶಸ್ತಿ ಪ್ರಧಾನ : 2023ನೇ ಸಾಲಿನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಬಂಬ್ರಾಣ ಯಜ್ಞೇಶ ಆಚಾರ್ಯ ಮಂಗಳೂರು ಇವರಿಗೆ ಶ್ರೀ ಸರಸ್ವತೀ ಅನುಗ್ರಹ ಪ್ರಶಸ್ತಿ, ಬ್ರಹ್ಮಶ್ರೀ ಸೀತಾರಾಮ ಶಾಸ್ತ್ರಿ ಮಂಗಳೂರು (ವೈದಿಕ), ಮಂಟಪ ಕೇಶವ ಆಚಾರ್ಯ ಸಾಲಿಗ್ರಾಮ, ಮಂಜುನಾಥ ಆಚಾರ್ಯ ಚಿತ್ರಪಾಡಿ , ವ್ಯಾಸರಾಯ ಆಚಾರ್ಯ ಪಾದೂರು, ದಿವಾಕರ ಆಚಾರ್ಯ ಕೋಟೆಕಾರು(ಶಿಲ್ಪ) ವಿಘ್ನೇಶ್ವರ ಭಟ್‌ ಪುತ್ತೂರು (ಜ್ಯೋತಿಷ್ಯ), ಡಾ. ಸಿ.ಆರ್. ಚಂದ್ರ ಶೇಖರ್ ಬೆಂಗಳೂರು( ವೈದ್ಯಕೀಯ), ನೇಜಾರು ವಿಶ್ವನಾಥ ರಾವ್‌ ಕತಾರ್‌, ಬಿ. ವಿಶ್ವನಾಥ ರಾವ್‌ ಕೊಯಂಬುತ್ತೂರು( ಮರಣೋತ್ತರ) ( ಉದ್ಯಮ) ಎಂಬಿವರಿಗೆ ಆನೆಗುಂದಿಶ್ರೀ ಪ್ರಶಸ್ತಿಗೆ ಪ್ರದಾನ ಮಾಡಲಾಯಿತು. ವಿಜಯ ಕುಮಾರ್‌ ಕುಂಟಾಡಿ ಕೆ.ಎ.ಎಸ್‌ , ಬ್ರಹ್ಮಾವರ ಡಾ. ಗೋಪಾಲಕೃಷ್ಣ ನವದೆಹಲಿ ಇವರಿಗೆ ವಿಶೇಷ ಗೌರವಾಭಿನಂದನೆ ನಡೆಯಿತು. ಶೈಕ್ಷಣಿಕ ಸಾಧಕರಿಗೆ ಅಭಿನಂದನೆ : 2021,2022,2023 ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್. ಎಲ್. ಸಿ, ಪಿ.ಯು.ಸಿ/ಪ್ಲಸ್‌ ಟು ಪರೀಕ್ಷೆಗಳಲ್ಲಿ 95% ಮತ್ತು ಅಧಿಕ ಅಂಕಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಹಾಗೂ ಪದವಿ, ಮೆಡಿಕಲ್‌, ಇಂಜಿನಿಯರಿಂಗ್ ಪರೀಕ್ಷೆಗಳಲ್ಲಿ ರೇಂಕ್‌ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರದೊಂದಿಗೆ ಜಗದ್ಗುರುಗಳವರಿಂದ ಅಭಿನಂದನೆ ನಡೆಯಿತು. ಶೀ ನಾಗಧರ್ಮೇಂದ್ರ ಸರಸ್ವತೀ ಸಂಸ್ಕೃತ ವೇದ ಸಂಜೀವಿನೀ ಪಾಠ ಶಾಲೆಯಲ್ಲಿ ಋಕ್‌ ಸಂಹಿತಿಯನ್ನು ಪೂರ್ತಿಗೊಳಿಸಿದ ಎರಡನೇ ತಂಡದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವಿದ್ಯಾರ್ಥಿಗಳಿಂದ ವಸಂತ ವೇದ ಶಿಬಿರದ ಸಮಾರೋಪದಲ್ಲಿ ಶಿಬಿರಾರ್ಥಿಗಳಿಗೆ ನಡೆಸಿದ ಸ್ಪರ್ಧಾ ವಿಜೆತರಿಗೆ ಹಾಗೂ ಶಿಬಿರದಲ್ಲಿ ಭಾಗವಹಿಸಿದವರಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಧರ್ಮಸಭೆಯಲ್ಲಿ ವಿದ್ವಾನ್ ವೇ.ಬ್ರ. ಶ್ರೀ ಶಂಕರ ಆಚಾರ್ಯ ಕಡ್ಲಾಸ್ಕರ್ (ಪಂಡಿತ್) ಹುಬ್ಬಳ್ಳಿ ಅವರಿಂದ ಗುರುಪೀಠಗಳು ಮತ್ತು ಯುವ ಜನತೆ ಎಂಬ ವಿಷಯದಲ್ಲಿ ಉಪನ್ಯಾಸ ನಡೆಯಿತು. ಆನೆಗುಂದಿ ಮೂಲ ಮಠ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪಂಚಸಿಂಹಾಸನ ವಿಕಾಸ ಸಮಿತಿ ಕೋಶಾಧಿಕಾರಿ ದಿನೇಶ್‌ ಆಚಾರ್ಯ ಪಡುಬಿದ್ರಿ, ಕಾಳಿಕಾಂಬಾ ದೇವಾಲಯಗಳ ಧರ್ಮದರ್ಶಿಗಳಾದ ಕೆ. ಕೇಶವ ಆಚಾರ್ಯ ಮಂಗಳೂರು, ಶಿಲ್ಪಿ ರಾಮಚಂದ್ರ ಆಚಾರ್ಯ ಕಾರ್ಕಳ, ಪ್ರಭಾಕರ ಆಚಾರ್ಯ ಚಿತ್ತೂರು, ಉಪ್ರಳ್ಳಿ, ಗಜಾನನ ಎನ್. ಆಚಾರ್ಯ ಭಟ್ಕಳ , ಮಧುಕರ ಚಂದ್ರಶೇಖರ ಆಚಾರ್ಯ ಗೋಕರ್ಣ,‌ ಶೇಖರ ಆಚಾರ್ಯ ಕಾಪು , ಬಿ.ಎಂ.ಯದುನಂದನ ಆಚಾರ್ಯ ಬಂಗ್ರಮಂಜೇಶ್ವರ, ಜನಾರ್ದನ ಆಚಾರ್ಯ ಆರಿಕ್ಕಾಡಿ, ಕೆ. ಪ್ರಭಾಕರ ಆಚಾರ್ಯ ಮಧೂರು, , ಮಹಾಸಂಸ್ಥಾನದ ವಿವಿಧ ಸಮಿತಿಗಳ ಪ್ರಮುಖರಾದ ಬಿ.ಸೂರ್ಯಕುಮಾರ್ ಆಚಾರ್ಯ ಹಳೆಯಂಗಡಿ, ಮೋಹನ್‌ ಕುಮಾರ್‌ ಬೆಳ್ಳೂರು, ಸುಂದರ ಆಚಾರ್ಯ ಬೆಳುವಾಯಿ, ಗಣೇಶ್ ಆಚಾರ್ಯ ಕೆಮ್ಮಣ್ಣು, ಸಂಧ್ಯಾ ಲಕ್ಷ್ಮಣ ಆಚಾರ್ಯ ಉಡುಪಿ, ಪಿ.ವಿ ಗಂಗಾಧರ ಆಚಾರ್ಯ ಉಡುಪಿ, ವೈ. ಧರ್ಮೇಂದ್ರ ಆಚಾರ್ಯ ನಿವೃತ್ತ ಸುಬೇದಾರ್ ಕಾಸರಗೋಡು, ವಿವಿಧ ಪ್ರಮುಖ ಸಂಘ ಸಂಸ್ಥೆಗಳ ಮುಖ್ಯಸ್ಥರಾದ ಮಧು ಆಚಾರ್ಯ ಮೂಲ್ಕಿ, ಸದಾನಂದ ಎಸ್. ಆಚಾರ್ಯ ಕಲ್ಯಾಣ ಪುರ, ತುಕಾರಾಮ ಆಚಾರ್ಯ ಬೆಂಗಳೂರು ಉಪಸ್ಥಿತರಿದ್ದರು. ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಲೋಕೇಶ್‌ ಎಂ. ಬಿ ಆಚಾರ್‌ ಕಂಬಾರು ಪ್ರಾಸ್ತಾವನೆಯೊಂದಿಗೆ ಸ್ವಾಗತಿಸಿದರು. ಕೋಶಾಧಿಕಾರಿ ಅರವಿಂದ ವೈ ಆಚಾರ್ಯ ವಂದಿಸಿದರು. ಕಾರ್ಯದರ್ಶಿ ಕೆ. ಎಂ. ಗಂಗಾಧರ ಆಚಾರ್ಯ ಕೊಂಡೆವೂರು ಕಾರ್ಯಕ್ರಮ ನಿರೂಪಿಸಿದರು. ಶೀ ನಾಗಧರ್ಮೇಂದ್ರ ಸರಸ್ವತೀ ಸಂಸ್ಕೃತ ವೇದ ಸಂಜೀವಿನೀ ಪಾಠ ಶಾಲೆಯ ವಿದ್ಯಾರ್ಥಿಗಳಿಂದ ವೇದ ಘೋಷ ನಡೆಯಿತು.