ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

2000 ರೂಪಾಯಿ ನೋಟು ಚಲಾವಣೆ ಹಿಂಪಡೆಯುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಘೋಷಣೆ

Posted On: 19-05-2023 07:27PM

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, 2,000 ರೂಪಾಯಿ ಮುಖಬೆಲೆಯ ನೋಟನ್ನು ಹಿಂತೆಗೆದುಕೊಂಡಿದೆ. ನೋಟುಗಳು ಸೆಪ್ಟೆಂಬರ್ 30 ರವರೆಗೆ ಕಾನೂನುಬದ್ಧವಾಗಿ ಮುಂದುವರಿಯುತ್ತದೆ.

ಸಾರ್ವಜನಿಕರಿಗೆ ಸಾಕಷ್ಟು ಸಮಯವನ್ನು ಒದಗಿಸಲು, ಎಲ್ಲಾ ಬ್ಯಾಂಕುಗಳಲ್ಲಿ ಸೆಪ್ಟೆಂಬರ್ 30, 2023 ರೊಳಗೆ ರೂ. 2000 ಮುಖಬೆಲೆಯ ನೋಟನ್ನು ಬ್ಯಾಂಕ್‌ನಲ್ಲಿ ಠೇವಣಿ ಮಾಡಿಕೊಳ್ಳಬಹುದು ಅಥವಾ ವಿನಿಮಯ ಮಾಡಿಕೊಳ್ಳಬಹುದು. ಅಕ್ಟೋಬರ್ 1, 2023 ರಿಂದ 2,000 ರೂಪಾಯಿ ನೋಟುಗಳು ಚಲಾವಣೆ ಸ್ಥಗಿತಗೊಳ್ಳಲಿದೆ.

ಈ ಬಗ್ಗೆ ಬ್ಯಾಂಕ್‌ಗಳಿಗೆ ಪ್ರತ್ಯೇಕ ಮಾರ್ಗಸೂಚಿಗಳನ್ನು ನೀಡಲಾಗಿದೆ. ತಕ್ಷಣವೇ ಜಾರಿಗೆ ಬರುವಂತೆ 2000 ರೂಪಾಯಿ ಮುಖಬೆಲೆಯ ನೋಟುಗಳನ್ನು ನೀಡುವುದನ್ನು ನಿಲ್ಲಿಸುವಂತೆ ಆರ್‌ಬಿಐ ಬ್ಯಾಂಕ್‌ಗಳಿಗೆ ಸೂಚಿಸಿದೆ.