ಕಾಪು : ಕರ್ನಾಟಕ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಮತ್ತು ಇತರರ ಪ್ರಮಾಣವಚನ ಸ್ವೀಕಾರದ ನೇರ ಪ್ರಸಾರದ ವೀಕ್ಷಣೆಯ ಅವಕಾಶವನ್ನು ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ವತಿಯಿಂದ ಕಾಪು ಪೇಟೆಯಲ್ಲಿ ಆಯೋಜಿಸಲಾಗಿತ್ತು.
ಪಕ್ಷದ ಮುಖಂಡರು, ಕಾರ್ಯಕರ್ತರು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ
ಪ್ರಮಾಣವಚನ ಸ್ವೀಕಾರದ ಸಂದರ್ಭ ಜೈಕಾರ ಹಾಕಿದರು. ಇದೇ ಸಂದರ್ಭ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಪದಗ್ರಹಣ ಸಮಾರಂಭದ ಸಂಭ್ರಮಾಚರಣೆ ಮಾಡಿದರು.