ಕಾಪು : ಇಲ್ಲಿನ ಮಜೂರು ಕರಂದಾಡಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ಶಾಲಾ ಪ್ರಾರಂಭೋತ್ಸವದ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ 9 ಗಂಟೆಗೆ ಮಂಗಳ ವಾದ್ಯಗಳೊಂದಿಗೆ ಅದ್ಧೂರಿಯಾಗಿ ಹಳೆ ವಿದ್ಯಾರ್ಥಿಗಳು, ಶಿಕ್ಷಕರು ಸ್ವಾಗತಿಸಿದರು.
ಶಾಲೆಯನ್ನು ಸ್ಥಳೀಯರ ಸಹಕಾರದಲ್ಲಿ ಸಿಂಗರಿಸಲಾಗಿತ್ತು. ಇದೇ ವೇಳೆ ವಿದ್ಯಾರ್ಥಿಗಳಿಗೆ ಸಿಹಿತಿಂಡಿ, ಉಪಹಾರ ನೀಡಲಾಯಿತು.
ಈ ಸಂದರ್ಭ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಲೀಲಾಧರ್ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪದ್ಮನಾಭ ಶಾನುಭಾಗ್, ಮುಖ್ಯ ಶಿಕ್ಷಕ ಆರ್. ಎಸ್ ಕಲ್ಲೂರ, ಗ್ರಾಮ ಪಂಚಾಯತ್ ಸದಸ್ಯ ಭಾಸ್ಕರ್ ಕುಮಾರ್, ಪಿಡಬ್ಲ್ಯೂಡಿ ಇಂಜಿನಿಯರ್ ಮಿಥುನ್ ಶೆಟ್ಟಿ, ನಿವೃತ್ತ ಮುಖ್ಯ ಶಿಕ್ಷಕ ನಿರ್ಮಲ್ ಕುಮಾರ್ ಹೆಗ್ಡೆ, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯ ನಾಗಭೂಷಣ್ ರಾವ್, ದಿನೇಶ್ ಶೆಟ್ಟಿ, ಹಳೆ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.