ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಸರಕಾರಿ ಸಂಯುಕ್ತ ಪ್ರೌಢಶಾಲೆ ಬೆಳಪು - ಶಾಲಾ ಪ್ರಾರಂಭೋತ್ಸವಕ್ಕೆ ಉಡುಪಿ ಜಿಲ್ಲಾಧಿಕಾರಿ ಚಾಲನೆ

Posted On: 31-05-2023 05:56PM

ಕಾಪು : ಸರಕಾರಿ ಸಂಯುಕ್ತ ಪ್ರೌಢಶಾಲೆ ಬೆಳಪು ಇಲ್ಲಿನ ಶಾಲಾ ಪ್ರಾರಂಭೋತ್ಸವಕ್ಕೆ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಆಗಮಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಕಾರ್ಯಕ್ರಮದ ಬಳಿಕ ಬೆಳಪು ಗ್ರಾಮದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್, ಕೈಗಾರಿಕಾ ಪಾರ್ಕ್, ಹಾಗೂ ಅತ್ಯಾಧುನಿಕ ವಿಜ್ಞಾನ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಬೆಳಪು ಗ್ರಾಮದ ಅಭಿವೃದ್ಧಿಯ ರೂವಾರಿ ಡಾ. ದೇವಿಪ್ರಸಾದ್ ಶೆಟ್ಟಿ ಹಾಗೂ ಗ್ರಾಮ ಪಂಚಾಯತ್ ನ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.