ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಟಪಾಡಿ : ತ್ರಿಶಾ ವಿದ್ಯಾ ಕಾಲೇಜು - ವಿದ್ಯಾರ್ಥಿಗಳಿಗೆ ಶಿಸ್ತು, ಸಂಯಮ, ನಾಯಕತ್ವದ ಗುಣ, ಪ್ರೇರಣೆಯ ಕುರಿತ ಕಾರ್ಯಾಗಾರ

Posted On: 03-06-2023 06:30PM

ಕಟಪಾಡಿ : ಮೇಜರ್ ರಾಧಾಕೃಷ್ಣ ಅವರಿಂದ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿಗಳಿಗೆ ಶಿಸ್ತು ಸಂಯಮ, ನಾಯಕತ್ವದ ಗುಣ ಮತ್ತು ಪ್ರೇರಣೆಯ ಕುರಿತಾದ ಕಾರ್ಯಾಗಾರವು ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ 120ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿ, ಯುವ ಜನಾಂಗದಲ್ಲಿ ಶಿಸ್ತು ಬಹಳ ಮುಖ್ಯ. ಸತತ ಪ್ರಯತ್ನದಿಂದ ಜೀವನದಲ್ಲಿ ಗೆಲುವು ಸಾಧ್ಯ ಎನ್ನುವುದನ್ನ ತಿಳಿದುಕೊಂಡರು.

ಕಾರ್ಯಕ್ರಮದಲ್ಲಿ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಇಂದುರೀತಿ, ಉಪನ್ಯಾಸಕ‌ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.