ಕಾಪು : ಕಟಪಾಡಿಯಲ್ಲಿ ನೂತನವಾಗಿ ಆರಂಭವಾಗುತ್ತಿದೆ ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜು
Posted On:
11-06-2023 09:19AM
ಕಾಪು : ಕಳೆದ 25 ವರ್ಷಗಳಿಂದ ವೃತ್ತಿಪರ ಶಿಕ್ಷಣಕ್ಕೆ ಹೆಸರುವಾಸಿಯಾಗಿ ಕರಾವಳಿ ಭಾಗದಲ್ಲಿ ವಾಣಿಜ್ಯ ವಿಭಾಗದ ಪದವಿ ಕಾಲೇಜುಗಳನ್ನು ಆರಂಭಿಸಿ ವಿದ್ಯಾರ್ಥಿಸ್ನೇಹಿ ಮೌಲ್ಯದಾರಿತ ಶಿಕ್ಷಣ ಸಂಸ್ಥೆಯಾಗಿ ಹೆಸರುವಾಸಿಯಾಗಿರುವುದೇ ತ್ರಿಶಾ ಸಂಸ್ಥೆಗಳು. ಪ್ರಸಕ್ತ ವರ್ಷದಿಂದ ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜಿನ್ನು ಎಸ್ ವಿ ಎಸ್ ಕ್ಯಾಂಪಸ್ ಕಟಪಾಡಿಯಲ್ಲಿ ಆರಂಭಿಸಲಿದೆ ಎಂದು ಶನಿವಾರ ಕಾಪು ಪ್ರೆಸ್ ಕ್ಲಬ್ ನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಸಿದ್ಧಾಂತ್ ಪೌಂಡೇಶನ್ ಅಧ್ಯಕ್ಷರಾದ ಸಿ.ಎ ಗೋಪಾಲಕೃಷ್ಣ ಭಟ್ ಹೇಳಿದರು.
ಪ್ರಸ್ತುತ ವಿದ್ಯಾರ್ಥಿಗಳಿಗೆ ವಿಜ್ಞಾನ ವಿಭಾಗದಲ್ಲಿ ಪಿ.ಸಿ.ಎಂ.ಬಿ ಮತ್ತು ಪಿ.ಸಿ.ಎಂಸಿ ವಿಷಯಗಳ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಾದ ಸಿ.ಇ.ಟಿ,(CET) ಜೆಇಇ (JEE)ಮತ್ತು ಎನ್ಇಇ ಟಿ (NEET)ಪರೀಕ್ಷೆಗಳಿಗೆ ತರಬೇತಿಯನ್ನ ಪ್ರಸಿದ್ಧ ಶಿಕ್ಷಣ ಸಂಸ್ಥೆಯಾದ ವೇದಾಂತು ದೀಕ್ಷಾ ಅಕಾಡೆಮಿ ಸಹಯೋಗದಲ್ಲಿ ದೇಶದ ವಿವಿಧ ಭಾಗಗಳ ಹೆಸರಾಂತ ನುರಿತ ವಿಷಯ ತಜ್ಞರಿಂದ ತರಬೇತಿಯನ್ನು ನೀಡಲಾಗುತ್ತದೆ. ವಾಣಿಜ್ಯ ವಿಭಾಗದಲ್ಲಿ ಬಿ.ಎ.ಬಿ.ಎಸ್, ಜೊತೆಗೆ ವೃತ್ತಿಪರ ಕೋರ್ಸ್ ಗಳಾದ ಸಿಎ, ಸಿಎಸ್ ಗಳಿಗೆ ಕರಾವಳಿ ಭಾಗದ ಪ್ರಸಿದ್ದ ವೃತ್ತಿಪರ ಶಿಕ್ಷಣ ಸಂಸ್ಥೆಯಾದ ತ್ರಿಶಾ ಕ್ಲಾಸಸ್ ತರಬೇತಿಯನ್ನು ಜೊತೆಗೆ ಬ್ಯಾಂಕಿಂಗ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ಒದಗಿಸಲಾಗುತ್ತದೆ. ವಿಶೇಷವಾಗಿ ಪಿಯುಸಿಯಲ್ಲಿ ವಾಣಿಜ್ಯ ವಿಭಾಗದಲ್ಲಿ ನಾಲ್ಕು ವಿಷಯದ ಜೊತೆಗೆ ಅರ್ಥಶಾಸ್ತ್ರ ಒಂದು ವಿಷಯವನ್ನು ಹೆಚ್ಚುವರಿಯಾಗಿ ವಿದ್ಯಾರ್ಥಿಗಳಿಗೆ ಕಲಿಸಲಾಗುತ್ತದೆ. ಇದರಿಂದ ಹೆಚ್ಚುವರಿ ಜ್ಞಾನದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಇದು ಪೂರಕವಾಗಲಿದೆ.
ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜಿನಲ್ಲಿ ಹುಡುಗರು ಮತ್ತು ಹುಡುಗಿಯರಿಗೆ ಪ್ರತ್ಯೇಕ ಹಾಸ್ಟೆಲ್ ಸೌಲಭ್ಯವಿದೆ .ಪ್ರತಿ ಒಂದು ವಿಷಯವನ್ನು ಸಮಗ್ರವಾಗಿ ತಿಳಿದುಕೊಂಡಿರುವ ನೈಪುಣ್ಯವುಳ್ಳ ಶಿಕ್ಷಕ ವೃಂದ, ವಿಶಾಲವಾದ ಸುಸಜ್ಜಿತ ತರಗತಿಗಳು, ಮೌಲ್ಯದಾರಿತ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗುವ ಪಠ್ಯೇತರ ಚಟುವಟಿಕೆಗಳು, ವಿಶಾಲವಾದ ಆಟದ ಮೈದಾನ, ಗ್ರಂಥಾಲಯದ ಸೌಲಭ್ಯ ವಿದ್ಯಾರ್ಥಿಗಳಿಗೆ ದೊರಕುತ್ತದೆ. ವಿದ್ಯಾರ್ಥಿಯ ವೈಯಕ್ತಿಕ ಜ್ಞಾನಾಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಕಾಲೇಜಿನಲ್ಲಿ ಮೆಂಟರಿಂಗ್ ಸೌಲಭ್ಯವನ್ನು ಅಳವಡಿಸಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಸೈಕೊಮ್ಯಾಟ್ರಿಕ್ ಟೆಸ್ಟ್ ಅನ್ನು ಬರೆದು ಅವುಗಳಿಂದ ಬಂದ ಪಲಿತಾಂಶದ ಆಧಾರದಲ್ಲಿ ತಮ್ಮ ವಿಭಾಗಗಳನ್ನು ಆಯ್ಕೆ ಮಾಡಿಕೊಂಡಿರುತ್ತಾರೆ.
ಸಿದ್ಧಾಂತ್ ಫೌಂಡೇಶನ್ ಕಳೆದ ಕೆಲವು ವರ್ಷಗಳಿಂದ ಪ್ರೇರಣಾ ಎನ್ನುವ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಗಾರವನ್ನ ಉಡುಪಿ ಕುಂದಾಪುರ ಶಿವಮೊಗ್ಗ ಉತ್ತರಕನ್ನಡ ಭಾಗದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ನೀಡುತ್ತಾ ಬಂದಿದೆ. ಜೊತೆಗೆ ಏಳು ದಿನಗಳ ಉಚಿತ ವಿಕಸನ ಎನ್ನುವ ಬೇಸಿಗೆ ಶಿಬಿರವನ್ನು ಅಂಬಲಪಾಡಿ ದೇವಸ್ಥಾನ ಉಡುಪಿಯಲ್ಲಿ ಆಯೋಜಿಸಿ ವಿದ್ಯಾರ್ಥಿಗಳಿಗೆ ಅವರ ಮುಂದಿನ ಹಾದಿಗೆ ಪೂರಕವಾಗಿರುವಂತಹ ವಾತಾವರಣವನ್ನು ನಿರ್ಮಿಸಿದೆ. ಪ್ರಸ್ತುತ ಕಟಪಾಡಿಯ ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿರುವ ಡಾ. ಅನಂತ್ ಪೈ ಇವರು ಜವಾಬ್ದಾರಿಯನ್ನ ನಿರ್ವಹಿಸುತ್ತಿದ್ದಾರೆ. ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಜೀವನ ಮೌಲ್ಯದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾಗುವಂತಹ ಶೈಕ್ಷಣಿಕ ವ್ಯವಸ್ಥೆಯನ್ನು ಕಲ್ಪಿಸಲು ಆರಂಭವಾಗಿರುವುದೇ ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜು, ಇದೇ ತಿಂಗಳ ಜೂನ್ 15ರಿಂದ ತರಗತಿಗಳು ಪ್ರಾರಂಭವಾಗಲಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಸಿದ್ಧಾಂತ ಫೌಂಡೇಶನ್ ಅಧ್ಯಕ್ಷರಾದ ಸಿಎ ಗೋಪಾಲಕೃಷ್ಣ ಭಟ್, ಸಿದ್ಧಾಂತ ಫೌಂಡೇಶನ್ ಟ್ರಸ್ಟಿ ರಾಮ್ ಪ್ರಭು, ತ್ರಿಶಾ ಸಮೂಹ ಸಂಸ್ಥೆಗಳ ಅಡ್ಮಿನಿಸ್ಟ್ರೇಟಿವ್ ಆಫೀಸರ್ ವಿ.ಕೆ ಉದ್ಯಾವರ, ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಅನಂತ್ ಪೈ, ಕನ್ನಡ ಪ್ರಾಧ್ಯಾಪಕ ಧೀರಜ್ ಬೆಳ್ಳಾರೆ ಉಪಸ್ಥಿತರಿದ್ದರು.