ಕಟಪಾಡಿ : ಪಡುಕುತ್ಯಾರು ಆನೆಗುಂದಿ ಶ್ರೀಗಳ ಚಾತುರ್ಮಾಸ್ಯ ಪೂರ್ವಭಾವಿ ಕ್ಷೇತ್ರ ಸಂದರ್ಶನ
Posted On:
11-06-2023 11:14AM
ಕಟಪಾಡಿ : ಪಡುಕುತ್ಯಾರಿನ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರರಾದ ಪರಮ ಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಚಾತುರ್ಮಾಸ್ಯ ಪೂರ್ವಭಾವೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇಗುಲಗಳ ಕ್ಷೇತ್ರ ಸಂದರ್ಶನವು ಶನಿವಾರ ಆರಂಭಗೊಂಡಿತು.
ಕೊಲಕಾಡಿ ಶ್ರೀ ಕಾಳಿಕಾಂಬಾ ದೇವಸ್ಥಾನ,
ಪಡುಪಣಂಬೂರು ನಾಲ್ಕೂರು ಪಂಜುರ್ಲಿ ದೈವಸ್ಥಾನ, ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದರು.
ಈ ಸಂದರ್ಭ ಮಾತನಾಡಿದ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರರಾದ ಪರಮ ಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳು ಭಕ್ತ ಜನರ ಸಂಪೂರ್ಣ ಸಹಕಾರದಿಂದ 7 ವರ್ಷದಿಂದ ಪಡುಕುತ್ಯಾರಿನಲ್ಲಿ ಅತ್ಯಂತ ಯಶಸ್ವಿಯಾಗಿ ಚಾತುರ್ಮಾಸ್ಯ ವ್ರತವನ್ನು ಆಚರಿಸಲು ಸಾಧ್ಯವಾಗಿದೆ. ಮಹಾಸಂಸ್ಥಾನದ ಆಸೆಟ್ ವತಿಯಿಂದ ನಡೆಸಲ್ಪಡುವ ಆನೆಗುಂದಿ ಶ್ರೀ ಸರಸ್ವತೀ ಪೀಠ ಸೂರ್ಯ ಚೈತನ್ಯ ಶಾಲೆಯ ಸಮಗ್ರ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ ಎಂದು ತಮ್ಮ ಆಶೀರ್ವಚನದಲ್ಲಿ ವಿವರಿಸಿದರು.
ಚಾತುರ್ಮಾಸ್ಯ ವ್ರತಚಾರಣೆ ಬಗ್ಗೆ ಆನೆಗುಂದಿ ಸಂಸ್ಥಾನದ ಪ್ರಧಾನ ಕಾರ್ಯದರ್ಶಿ
ಲೋಕೇಶ್ ಎಂ.ಬಿ ಆಚಾರ್ ಕಂಬಾರು
ಸಂಪೂರ್ಣ ಮಾಹಿತಿ ನೀಡಿದರು.
ಚಾತುರ್ ರ್ಮಾಸ್ಯ ವ್ರತಚಾರಣೆಗೆ ಹಾಗೂ ಆಸೆಟ್ ನ ಸೂರ್ಯ ಚೈತನ್ಯ ಶಾಲೆಗೆ ಸಂಪೂರ್ಣ ರೀತಿಯಲ್ಲಿ ಮಂಗಳೂರು ಶ್ರೀ ಕಾಳಿಕಾಂಬಾ ಕ್ಷೇತ್ರದ ವತಿಯಿಂದ, ಭಕ್ತಾಧಿಗಳಿಂದ ಪೂರ್ಣ ರೀತಿಯಲ್ಲಿ ಸಹಕಾರ ನೀಡುವುದಾಗಿ ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ 2ನೇ ಮೊಕ್ತೇಸರ ಸುಂದರ ಆಚಾರ್ಯ ಬೆಳುವಾಯಿ ಹೇಳಿದರು.
ಈ ಸಂದರ್ಭ ಶ್ರೀ ಕ್ಷೇತ್ರದ 3ನೇ ಮೊಕ್ತೇಸರ ಎ ಲೋಕೇಶ್ ಆಚಾರ್ಯ ಚಿಲಿಂಬಿ, ಕ್ಷೇತ್ರದ ಆಡಳಿತ ಮಂಡಳಿ ಸದಸ್ಯರು, ಶ್ರೀ ಗುರು ಸೇವಾ ಪರಿಷತ್ ಮಂಗಳೂರು ವಲಯದ ಅಧ್ಯಕ್ಷ ಶೇಖರ್ ಆಚಾರ್ಯ ಗುರು ಸೇವಾ ಪರಿಷತ್ ಪುತ್ತೂರು ವಲಯದ ಅಧ್ಯಕ್ಷ ಪುರುಷೋತ್ತಮ ಆಚಾರ್ಯ, ಆಸೆಟ್ ಅಧ್ಯಕ್ಷ ಮೋಹನ್ ಕುಮಾರ್ ಬೆಳ್ಳೂರು, ಶ್ರೀ ಮಠದ ಆಪ್ತ ಸಹಾಯಕ ಲೋಲಾಕ್ಷ ಆಚಾರ್ಯ, ಶ್ರೀ ಕಾಳಿಕಾಂಬಾ ಸೇವಾ ಸಮಿತಿ, ವಿಶ್ವಬ್ರಾಹ್ಮಣ ಮಹಿಳಾ ಸಮಿತಿ, ದ. ಕ. ಜಿಲ್ಲಾ ಚಿನ್ನದ ಕೆಲಸ ಗಾರರ ಸಂಘ, ವಿಶ್ವಕರ್ಮ ಯುವ ವೇದಿಕೆ, ವಿಶ್ವಕರ್ಮ ಯುವ ಮಿಲನದ ಸದಸ್ಯರು, ಶ್ರೀ ಗುರು ಸೇವಾ ಪರಿಷತ್ ಸದಸ್ಯರು ಹಾಗೂ ಅನೇಕ ಭಕ್ತಾಧಿಗಳು ಉಪಸ್ಥಿತರಿದ್ದರು. ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆಡಳಿತ ಮಂಡಳಿಯ ವಿಶೇಷ ಆಹ್ವಾನಿತ ಸದಸ್ಯ ಸುಜೀರ್ ವಿನೋದ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.