ಕಾಪು : ದೇಸಿಕ್ರೂ ಕಾಪು ಪ್ರೈ.ಲಿ., ಜೇಸಿಐ ಕಾಪು ಮತ್ತು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಸಹಭಾಗಿತ್ವದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಜೂನ್ 24, ಶನಿವಾರ
ಬೆಳಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ದೇಸೀ ಕ್ರೂ ಪ್ರೈ. ಲಿ., N.H. 66, ದಂಡತೀರ್ಥ, ಉಳಿಯಾರಗೋಳಿ, ಕಾಪು ಇಲ್ಲಿ ನಡೆಯಲಿದೆ.
ಶಿಬಿರದಲ್ಲಿ ಕಣ್ಣಿನ ಸಂಪೂರ್ಣ ತಪಾಸಣೆ ನಡೆಸಲಾಗುವುದು. ಅಗತ್ಯವುಳ್ಳವರಿಗೆ ಉಚಿತವಾಗಿ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ, ಗ್ಲುಕೋಮಾ ಹಾಗೂ ಕಣ್ಣಿನ ಇತರ ಚಿಕಿತ್ಸೆಗಳನ್ನು ನಡೆಸಲಾಗುವುದು. ಶಿಬಿರದಲ್ಲಿ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾದವರಿಗೆ ಅದೇ ದಿನಾಂಕದಂದು ಆಸ್ಪತ್ರೆಯಿಂದ ಉಚಿತ ವಾಹನ ಸೌಲಭ್ಯವಿದೆ. ಶಸ್ತ್ರ ಚಿಕಿತ್ಸೆಯ ನಂತರ, ಮರು ತಪಾಸಣೆಗೆ ತಿಳಿಸಿದ ದಿನಾಂಕದಂದು ಶಿಬಿರ ನಡೆದ ಸ್ಥಳದಲ್ಲಿ ಕಡ್ಡಾಯವಾಗಿ ಹಾಜರಾಗತಕ್ಕದು.
ರೆಷನ್ ಕಾರ್ಡ್ ಅಥವಾ ಆಧಾರ್ ಕಾರ್ಡ್ ಪ್ರತಿಯನ್ನು ತರಬೇಕು. ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ 9448501172, 9326012660