ಕಾಪು ತಾಲೂಕು ಪ್ರೆಸ್ ಕ್ಲಬ್ : ಪದಾಧಿಕಾರಿಗಳ ಆಯ್ಕೆ
Posted On:
27-06-2023 01:23PM
ಕಾಪು : ಇಲ್ಲಿನ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ 2023 ನೇ ಸಾಲಿನ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಹರೀಶ್ ಹೆಜಮಾಡಿ, ಕಾರ್ಯದರ್ಶಿಯಾಗಿ ಸಂತೋಷ್ ಕಾಪು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ವಿಜಯ ಆಚಾರ್ಯ, ಜೊತೆ ಕಾರ್ಯದರ್ಶಿಯಾಗಿ ಕರುಣಾಕರ ನಾಯಕ್, ಕೋಶಾಧಿಕಾರಿಯಾಗಿ ಹೇಮನಾಥ ಪಡುಬಿದ್ರಿ, ಕ್ರೀಡಾ ಕಾರ್ಯದರ್ಶಿಯಾಗಿ ರಾಕೇಶ್ ಕುಂಜೂರು ಆಯ್ಕೆಯಾದರು.
ಚುನಾವಣಾ ಪ್ರಕ್ರಿಯೆಯನ್ನು ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ,ಕಾರ್ಯದರ್ಶಿ ಪ್ರಮೋದ್ ಸುವರ್ಣ, ಕಾರ್ಯಕಾರಿಣಿ ಸಮಿತಿ ಸದಸ್ಯ ವಿಜಯ ಆಚಾರ್ಯ ನಡೆಸಿದರು.