ಶಿರ್ವ : ಸಂತ ಮೇರಿ ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ದಿನಾಚರಣೆ
Posted On:
27-06-2023 04:48PM
ಶಿರ್ವ: ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ ಅಂತಾರಾಷ್ಟ್ರೀಯ ಮಾದಕ ವ್ಯಸನ- ಅಕ್ರಮ ಸಾಗಾಟ ವಿರೋಧಿ ದಿನಾಚರಣೆಯನ್ನು ಏರ್ಪಡಿಸಲಾಯಿತು
ಇಂದಿನ ಜಗತ್ತಿನಲ್ಲಿ ಯುವಕರು ಅಪಾಯಕಾರಿ ಮಾದಕ ವಸ್ತುಗಳತ್ತ ಆಕರ್ಷಿತರಾಗುತ್ತಿದ್ದಾರೆ ಮತ್ತು ಇದು ಜೀವಮಾನದ ಶಿಕ್ಷೆಗೆ ಕಾರಣವಾಗುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಅಧ್ಯಕ್ಷ ನೆಲೆಯಲ್ಲಿ ಪ್ರತಿಜ್ಞಾವಿಧಿ ಬೋಧಿಸಿದ ಅವರು, ಸಮಾಜದಲ್ಲಿ ಮಾದಕ ವ್ಯಸನದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಯುವಕರು ಪಾಲ್ಗೊಳ್ಳುವಂತೆ ಸಲಹೆ ನೀಡಿದರು. ಇಂತಹ ಕಾರ್ಯಕ್ರಮ ಹಮ್ಮಿಕೊಂಡ ಕಾಲೇಜಿನ ಎನ್.ಸಿ.ಸಿ ಘಟಕವನ್ನು ಪ್ರಶಂಸಿದರು ಮತ್ತು ಶುಭ ಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಉಪನ್ಯಾಸಕ ಪ್ರಕಾಶ್, ಲ್ಲ್ಯಾನ್ಸ್ ಕಾರ್ಪೊರಲ್ ಅನೀಶ್ ಭಟ್, ಶೆಟ್ಟಿಗಾರ್ ಹೇಮಾಶ್ರೀ ಸುದರ್ಶನ್ ಮತ್ತು ಕೆಡೆಟ್ಗಳು ಉಪಸ್ಥಿತರಿದ್ದರು. ಕ್ಯಾಡೆಟ್ಗಳಾದ ಅನುಪ್ ನಾಯಕ ಹಾಗೂ ವಿಶಾಲ್ ಟೆರೆನ್ಸ್ ವಾಜ್ ಸಹಕರಿಸಿದರು. ಕೆಡೆಟ್ ಆದಿತ್ಯ ಶೆಟ್ಟಿಗಾರ್ ಸ್ವಾಗತಿಸಿ , ಕೆಡೆಟ್ ಗೌತಮಿ ಕರ್ಕೇರ ವಂದಿಸಿದರು. ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಅವರು ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡಿ ಕಾರ್ಯಕ್ರಮವನ್ನು ನಿರೂಪಿಸಿದರು.