ಹೆಜಮಾಡಿ : ಇಲ್ಲಿನ ಗ್ರಾಮ ಪಂಚಾಯತ್ ನಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಇ - ಕೆವೈಸಿ ಜೋಡಣೆಯ ಕಾರ್ಯಕ್ರಮ ಇಂದು ನಡೆಯಿತು.
ಸಹಾಯಕ ಕೃಷಿ ನಿರ್ದೇಶಕರಾದ
ಮೋಹನ್ ರಾಜ್ ಇ- ಕೆವೈಸಿ ಕಾರ್ಯಕ್ರಮದ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಈ ಸಂದರ್ಭ ಹೆಜಮಾಡಿ ಗ್ರಾಮ ಪಂಚಾಯತ್
ಅಧ್ಯಕ್ಷರಾದ ಪಾಂಡುರಂಗ ಕರ್ಕೇರ, ಸದಸ್ಯರಾದ ಪ್ರಾಣೇಶ್ ಹೆಜಮಾಡಿ, ಬಬಿತ, ಕಾರ್ಯದರ್ಶಿ ದೀಪ, ಕೃಷಿ ಇಲಾಖೆಯ ಸುನಿಲ್ ಮತ್ತಿತರರು ಉಪಸ್ಥಿತರಿದ್ದರು.