ಕಾಪು : ಸನ್ಯಾಸಿಗಳು ನಡೆಸುವ ಚಾತುರ್ಮಾಸ್ಯಕ್ಕೆ ವಿಶೇಷ ಮಹತ್ವವಿದೆ. ಈ ಅವಧಿಯಲ್ಲಿ ಆತ್ಮೋನ್ನತಿಗೆ ಬೇಕಾದ ಚಿಂತನೆಗಳನ್ನು ಮೈಗೂಡಿಸಿಕೊಳ್ಳುವುದರೊಂದಿಗೆ ಸಮಾಜದ ಜನರಲ್ಲಿ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಪ್ರಜ್ಞೆಯನ್ನು ಮೂಡಿಸುವುದಕ್ಕಾಗಿ ಕಠಿಣ ಪ್ರಯತ್ನಗಳು ನಡೆಯಲಿವೆ ಎಂದು ಕಟಪಾಡಿ ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಹೇಳಿದರು.
ಪಡುಕುತ್ಯಾರು ಶ್ರೀಮದ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನದಲ್ಲಿ ಸೋಮವಾರ ಆರಂಭವಾದ ಚಾತುರ್ಮಾಸ್ಯ ವ್ರತಾಚರಣೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದರು.
ಪ್ರತೀಯೊಬ್ಬ ವ್ಯಕ್ತಿಗೂ ಗುರು ಪರಂಪರೆ ಮತ್ತು ಚಾತುರ್ಮಾಸ್ಯದ ಕುರಿತಾಗಿ ಅರಿವು, ಜ್ಞಾನ ಹೆಚ್ಚಿಸುವುದಕ್ಕಾಗಿ ನಮ್ಮ ಪ್ರಯತ್ನ ಜಾರಿಯಲ್ಲಿರುತ್ತದೆ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಗಳಿಗೆ ಒತ್ತು ನೀಡಿ ಈ ಬಾರಿಯ ಚಾತುರ್ಮಾಸ್ಯವನ್ನು ನಡೆಸಲಾಗುವುದು. ಪಾಶ್ಚಾತ್ಯ ಸಂಸ್ಕೃತಿಯ ಮೇಲಿನ ವ್ಯಾಮೋಹದಿಂದಾಗಿ ಜನರು ಭಾರತೀಯ ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ. ಭಾರತೀಯ ಸಂಸ್ಕೃತಿಯನ್ನು ಅನುಸರಿಸಿ, ಸಂಸ್ಕಾರವನ್ನು ಬೆಳೆಸಿಕೊಳ್ಳುವುದು ಇಂದಿನ ಅನಿವಾರ್ಯತೆಯಾಗಿದೆ. ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರದ ಅನುಸರಣೆಯೇ ನಮಗೆ ಸಮಾಜದಲ್ಲಿ ಸುಸಂಸ್ಕೃತರಾಗಿ ಬಾಳಿ ಬದುಕಲು ದಾರಿದೀಪವಾಗಿದೆ ಎಂದರು.
ಸ್ವಾಮೀಜಿಯವರಿಂದ ಗೌರವಾರ್ಪಣೆ ಸ್ವೀಕರಿಸಿ ಮಾತನಾಡಿದ ರಂಗಭೂಮಿ ಹಾಗೂ ಚಿತ್ರ ನಟ ಸತೀಶ್ ಆಚಾರ್ಯ ಪೆರ್ಡೂರು, ಹುಟ್ಟು ಮತ್ತು ಸಾವುಗಳ ನಡುವಿನ ಜೀವನ ಯಶಸ್ವಿಯಾಗಿ ಮುನ್ನಡೆಯುವಲ್ಲಿ ಗುರುಗಳ ಅನುಗ್ರಹ, ಆಶೀರ್ವಚನ ಮತ್ತು ಮಾರ್ಗದರ್ಶನ ಅತೀ ಅಗತ್ಯವಾಗಿದೆ. ಜಗದ್ಗುರು ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರನ್ನು ಗುರುಗಳನ್ನಾಗಿ ಪಡೆದಿರುವ ನಮ್ಮ ಸಮಾಜ ಧನ್ಯವಾಗಿದೆ. ಗುರು ಪರಂಪರೆ, ಗುರು ತತ್ವ ಮತ್ತು ಧಾರ್ಮಿಕ ಆಚರಣೆಗಳ ಬಗ್ಗೆ ಇನ್ನಷ್ಟು ಒತ್ತು ನೀಡುವ ಮೂಲಕ ನಮ್ಮಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಹೆಚ್ಚಿಸಿಕೊಳ್ಳೋಣ ಎಂದರು.
ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಮತ್ತು ಆನೆಗುಂದಿ ಪ್ರತಿಷ್ಠಾನದ ಅಧ್ಯಕ್ಷ ವಡೇರ ಹೋಬಳಿ ಶ್ರೀಧರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.
ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಗೌರವಾಧ್ಯಕ್ಷ ಪಿ. ವಿ. ಗಂಗಾಧರ ಆಚಾರ್ಯ ಉಡುಪಿ, ಶ್ರೀ ನಾಗ ಧರ್ಮೇಂದ್ರ ಸರಸ್ವತಿ ಸಂಸ್ಕೃತ ವೇದ ಸಂಜೀವಿನೀ ಪಾಠಶಾಲೆ ಪ್ರಧಾನ ಸಂಚಾಲಕ ಬಿ. ಸೂರ್ಯಕುಮಾರ ಆಚಾರ್ಯ ಹಳೆಯಂಗಡಿ, ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪಂಚಸಿಂಹಾಸನ ವಿಕಾಸ ಸಮಿತಿ ಅಧ್ಯಕ್ಷ ಹರಿಶ್ಚಂದ್ರ ಎನ್ ಆಚಾರ್ಯ ಬೆಂಗಳೂರು, ಅಸ್ಸೆಟ್ ಅಧ್ಯಕ್ಷ ಮೋಹನ್‌ಕುಮಾರ್ ಬೆಳ್ಳೂರು, ಗೋವು ಪರ್ಯಾವರಣ್ ಸಂರಕ್ಷಣಾ ಟ್ರಸ್ಟ್ ಅಧ್ಯಕ್ಷ ಸುಂದರ ಆಚಾರ್ಯ ಬೆಳುವಾಯಿ, ಆನೆಗುಂದಿ ಗುರು ಸೇವಾ ಪರಿಷತ್ ಕೇಂದ್ರ ಸಮಿತಿ ಅಧ್ಯಕ್ಷ ಗಣೇಶ್ ಆಚಾರ್ಯ ಕೆಮ್ಮಣ್ಣು, ಸರಸ್ವತಿ ಮಾತೃ ಮಂಡಳಿ ಅಧ್ಯಕ್ಷೆ ಸಂಧ್ಯಾ ಲಕ್ಷ್ಮಣ ಆಚಾರ್ಯ ಉಡುಪಿ, ಕುತ್ಯಾರು ಗ್ರಾ.ಪಂ. ಅಧ್ಯಕ್ಷೆ ಲತಾ ಎಸ್. ಆಚಾರ್ಯ ಕುತ್ಯಾರು, ವಿವಿಧ ದೇವಸ್ಥಾನಗಳ ಆಡಳಿತ ಮೊಕ್ತೇಸರರಾದ ಕೆ. ಕೇಶವ ಆಚಾರ್ಯ ಮಂಗಳೂರು, ಕಳಿ ಚಂದ್ರಯ್ಯ ಆಚಾರ್ಯ ಉಪ್ರಳ್ಳಿ, ಶಿಲ್ಪಿ ರಾಮಚಂದ್ರ ಆಚಾರ್ಯ ಕಾರ್ಕಳ, ಗಜಾನನ ಎನ್ ಆಚಾರ್ಯ ಭಟ್ಕಳ, ಯದುನಂದನ ಆಚಾರ್ಯ ಬಂಗ್ರಮಂಜೇಶ್ವರ, ಮಧುಕರ ಚಂದ್ರಶೇಖರ ಆಚಾರ್ಯ ಹೊನ್ನಾವರ, ಬಾಲಕೃಷ್ಣ ಆಚಾರ್ಯ ಬೆಳಪು, ಶೇಖರ ಆಚಾರ್ಯ ಕಾಪು, ಸುಂದರ ಆಚಾರ್ಯ ಕೋಟೆಕಾರು, ಜನಾರ್ದನ ಆಚಾರ್ಯ ಆರಿಕ್ಕಾಡಿ, ನ್ಯಾಯವಾದಿ ಕೆ ಪ್ರಭಾಕರ ಆಚಾರ್ಯ ಕೋಟೆಕಾರು, ಸಿಎ ಶ್ರೀಧರ ಆಚಾರ್ಯ ಪನ್ವೇಲ್, ಜ್ಯೋತಿಷ್ಯ ವಿದ್ವಾನ್ ಉಮೇಶ್ ಆಚಾರ್ಯ ಪಡೀಲು, ವೈ. ಧರ್ಮೇಂದ್ರ ಆಚಾರ್ಯ ಕಾಸರಗೋಡು, ತ್ರಾಸಿ ಸುಧಾಕರ ಆಚಾರ್ಯ, ಜಯಕರ ಆಚಾರ್ಯ ಕರಂಬಳ್ಳಿ, ಬಂಬ್ರಾಣ ಯಜ್ಞೇಶ ಆಚಾರ್ಯ ಮಂಗಳೂರು ಮೊದಲಾದವರು ಉಪಸ್ಥಿತರಿದ್ದರು. ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ. ಬಿ. ಆಚಾರ್ ಕಂಬಾರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕೆ.ಎಂ. ಗಂಗಾಧರ ಆಚಾರ್ಯ ನಿರೂಪಿಸಿದರು. ಕೋಶಾಧಿಕಾರಿ ಅರವಿಂದ ವೈ. ಆಚಾರ್ಯ ವಂದಿಸಿದರು.