ಕಾಪು : ಧಾರಾಕಾರ ಮಳೆಯಿಂದ ಕಟಪಾಡಿಯ ಮಟ್ಟು ಅಣೆಕಟ್ಟು ಸಂಪೂರ್ಣವಾಗಿ ತುಂಬಿ
ಅಪಾಯ ಮಟ್ಟದಲ್ಲಿ ಹರಿಯುತ್ತಿದ್ದು ಈ ಪ್ರದೇಶಕ್ಕೆ ಮತ್ತು ತಾಲೂಕಿನ ಮಜೂರು ಬ್ರಹ್ಮ ಬೈದರ್ಕಳ ಗರಡಿ ಇಲ್ಲಿಗೆ ಹೋಗುವ ದಾರಿ ಹಾಗೂ ಗರಡಿಯು ಸಂಪೂರ್ಣ ಜಲಾವೃತಗೊಂಡಿದ್ದು ಅಪಾಯ ಮಟ್ಟದಲ್ಲಿದ್ದು ಇಲ್ಲಿಗೆ ಮಾಜಿ ಸಚಿವರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೊರಕೆರವರು ಇಂದು ಭೇಟಿ ನೀಡಿ ಸುತ್ತಮುತ್ತಲಿನ ಜನರಿಗೆ ಜಾಗೃತರಾಗಿರುವಂತೆ ತಿಳಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿದರು.
ಈ ಸಂದರ್ಭ ಮಾಜಿ ಸಚಿವರೊಂದಿಗೆ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಅಮೀರ್ ಕಾಪು, ಪ್ರಶಾಂತ್ ಜತ್ತನ್ನ, ಶರ್ಪುದ್ದೀನ್ ಶೇಖ್, ಸುನಿಲ್ ಬಂಗೇರ, ಆಶೋಕ್ ನಾಯರಿ, ರಾಹುಲ್, ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.