ಕಾಪು : ನೆಲ್ಲಿಕಟ್ಟೆಯಲ್ಲಿ ಬಾಲ ಸಂಸ್ಕಾರ ಕೇಂದ್ರ ಉದ್ಘಾಟನೆ
Posted On:
08-07-2023 10:22PM
ಕಾಪು : ವಿಶ್ವ ಹಿಂದೂ ಪರಿಷದ್ ಭಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮೂಡುಬೆಳ್ಳೆ ಘಟಕದ ವತಿಯಿಂದ ನೆಲ್ಲಿಕಟ್ಟೆಯಲ್ಲಿ ಬಾಲ ಸಂಸ್ಕಾರ ಕೇಂದ್ರ ಉದ್ಘಾಟನೆಗೊಂಡಿತು.
ಶಿರ್ವವಲಯದ ಗೌರವಸಲಹೆಗಾರರಾದ ಮಧ್ವರಾಜಭಟ್ ದೀಪ ಬೆಳಗಿಸುವುದರ ಮೂಲಕ ಬಾಲ ಸಂಸ್ಕಾರ ಕೇಂದ್ರವನ್ನು ಉದ್ಘಾಟಿಸಿ ಬಾಲ ಸಂಸ್ಕಾರ ಕೇಂದ್ರದ ಅವಶ್ಯಕತೆಯ ಬಗ್ಗೆ ಮಾತನಾಡಿದರು.
ಈ ಸಂದರ್ಭ ಕಾಪು ಪ್ರಖಂಡ ಕಾರ್ಯದರ್ಶಿ ರಾಜೇಂದ್ರಶೆಣೈ, ಮಾತೃಶಕ್ತಿ ಕಾಪು ತಾಲೂಕು ಪ್ರಮುಖ್ ವಾಣಿ ಆಚಾರ್ಯ, ಶಿರ್ವವಲಯ ಗೌರವಾಧ್ಯಕ್ಷರಾದ ನಾಗರಾಜಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿಶ್ವ ಹಿಂದೂ ಪರಿಷದ್ ಕಾಪು ಪ್ರಖಂಡ ಸಹ ಕಾರ್ಯದರ್ಶಿ ವಿಖ್ಯಾತ್ ಭಟ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.