ಕಾಪು: ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನವು ಸಂಪೂರ್ಣ ಜೀರ್ಣೋದ್ಧಾರಗೊಳ್ಳುತ್ತಿದ್ದು, ಈ ಸಲುವಾಗಿ ಭಾನುವಾರ ಸಂಜೆ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸಹಕರಿಸುವಂತೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯಾ, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರಾದ ಬೆಳಪು ದೇವಿಪ್ರಸಾದ್ ಶೆಟ್ಟಿ, ಆರ್ಥಿಕ ಸಮಿತಿಯ ಪ್ರಧಾನ ಸಂಚಾಲಕರಾದ ಉದಯ ಸುಂದರ್ ಶೆಟ್ಟಿ ಉಪಸ್ಥಿತರಿದ್ದರು.