ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉಡುಪಿ : ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಯುವ ಪ್ರತಿಭೆ, ವಿದ್ಯಾರ್ಥಿ ವೇತನ ಪ್ರಶಸ್ತಿಗೆ ನೇಹಾ ಹೊಳ್ಳ ಆಯ್ಕೆ

Posted On: 12-07-2023 08:08PM

ಉಡುಪಿ‌ : ಭಾರತ ಸರಕಾರದ ಸಂಸ್ಕೃತಿ ಸಚಿವಾಲಯದ, ಸಾಂಸ್ಕೃತಿಕ ಸಂಪನ್ಮೂಲ ಮತ್ತು ತರಬೇತಿ ಕೇಂದ್ರ (ಸಿ ಸಿ ಆರ್ ಟಿ) ನಡೆಸಿದ , 2020-2021 ಭಾರತದ ಯುವ ಪ್ರತಿಭಾ ಶೋಧದಲ್ಲಿ, ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಯುವ ಪ್ರತಿಭೆ, ವಿದ್ಯಾರ್ಥಿ ವೇತನ ಪ್ರಶಸ್ತಿಗೆ, ಉಡುಪಿ ಜಿಲ್ಲೆಯಿಂದ ಏಕೈಕ ಅಭ್ಯರ್ಥಿಯಾಗಿ ಮಣೂರು ಗ್ರಾಮದ ನೇಹಾ ಹೊಳ್ಳ ಆಯ್ಕೆಯಾಗಿದ್ದಾರೆ.

ಇವರು ಮಣೂರು ಡಾ ಎಂ ವಿ ಹೊಳ್ಳ , ಶಾರದಾ ಹೊಳ್ಳ ಇವರ ಪುತ್ರಿ .ಇವರು ಕಳೆದ 9 ವರ್ಷಗಳಿಂದ ವಿದ್ವಾನ್ ಸತೀಶ್ ಭಟ್ ಮಾಳಕೊಪ್ಪ ಇವರ ಬಳಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತವನ್ನು ಅಭ್ಯಾಸ ಮಾಡುತ್ತಿದ್ದಾರೆ.

ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ 2023 ಮಾರ್ಚ್ ನಲ್ಲಿ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ವಿಭಾಗದ ಸೀನಿಯರ್ ಪರೀಕ್ಷೆಯನ್ನು ಉನ್ನತ ಶ್ರೇಣಿಯಲ್ಲಿ ಮುಗಿಸಿರುತ್ತಾರೆ.