ಬಂಟಕಲ್ಲು : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ತಾಂತ್ರಿಕ ಶಿಕ್ಷಣದ ಜೊತೆಗೆ ಇನ್ನೆರಡು ಶೈಕ್ಷಣಿಕ ಸಂಸ್ಥೆಗಳ ಕಾರ್ಯಾರಂಭ
Posted On:
19-07-2023 05:32PM
ಬಂಟಕಲ್ಲು : ಉಡುಪಿಯ ಶ್ರೀ ಸೋದೆ ವಾದಿರಾಜ ಮಠದ ಆಶ್ರಯದಲ್ಲಿ ಬಂಟಕಲ್‌ನಲ್ಲಿ ಸ್ಥಾಪಿತವಾದ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯಕ್ಕೆ ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಗೆ ಅತೀ ಅಗತ್ಯವಾದ NAAC ನಿಂದ “ಎ” ಶ್ರೇಣಿಯ ಮಾನ್ಯತೆ ಹಾಗು ರಾಷ್ಟ್ರೀಯ ಮೌಲ್ಯಾಂಕನ ಮಂಡಳಿ (NBA)ಯಿಂದ ಮಾನ್ಯತೆ ಕೂಡಾ ದೊರೆತಿದೆ. ಗುಣಮಟ್ಟದ ತಾಂತ್ರಿಕ ಶಿಕ್ಷಣವನ್ನು ಖಾತ್ರಿಪಡಿಸುವ ಈ ಎರಡು ಮಾನ್ಯತೆ ಗಳನ್ನು ವಿದ್ಯಾಸಂಸ್ಥೆಯು ಪ್ರಾರಂಭವಾದ 9 ಮತ್ತು 11ನೇ ವರ್ಷಗಳಲ್ಲಿ ಪಡೆದಿರುವ ಕರಾವಳಿ ಕರ್ನಾಟಕದ ಪ್ರಪ್ರಥಮ ತಾಂತ್ರಿಕ ಶಿಕ್ಷಣ ಸಂಸ್ಥೆ ಎನ್ನುವ ಹೆಗ್ಗಳಿಕೆ ಈ ವಿದ್ಯಾ ಸಂಸ್ಥೆಗೆ ಸಿಕ್ಕಿರುವುದು ಹೆಮ್ಮೆಯ ವಿಷಯ.
ಇದೀಗ 2023-24 ಶೈಕ್ಷಣಿಕ ವರ್ಷದಿಂದ ಉಡುಪಿ ಸುತ್ತಮುತ್ತಲಿನ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅತೀ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದೊಂದಿಗೆ ಶ್ರೀ ಸೋದೆ ವಾದಿರಾಜ ಮಠದ ಆಡಳಿತಕ್ಕೆ ಒಳಪಟ್ಟ ಶ್ರೀ ವಿಷ್ಣುಮೂರ್ತಿ ಹಯವದನ ಸ್ವಾಮಿ ಎಜ್ಯುಕೇಶನ್ ಸೊಸೈಟಿಯ ಆಶ್ರಯಲ್ಲಿ ನಿರಾಮಯ ಕಾಲೇಜ್ ಆಫ್ ನರ್ಸಿಂಗ್‌ನಲ್ಲಿ 4 ವರ್ಷದ ಬಿ.ಎಸ್ಸಿ ನರ್ಸಿಂಗ್ ಹಾಗೂ ನಿರಾಮಯ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸ್‌ನಲ್ಲಿ ಅನಸ್ತೀಶಿಯ ಆಪರೇಶನ್ ಥಿಯೇಟರ್ ಟೆಕ್ನಾಲಜಿ, ಮೆಡಿಕಲ್ ಲ್ಯಾಬ್ ಟೆಕ್ನಾಲಜಿ ಹಾಗೂ ಮೆಡಿಕಲ್ ಲ್ಯಾಬ್ ಟೆಕ್ನಾಲಜಿ, ಮೆಡಿಕಲ್ ಇಮೇಜಿಂಗ್ ಟೆಕ್ನಾಲಜಿ ಎಂಬ ಮೂರು ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್‌ಗಳ ಜೊತೆಗೆ ಮ್ಯಾನೇಜ್‌ಮೆಂಟ್‌ನಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಮಾರ್ಕೆಟಿಂಗ್ ಹಾಗೂ ಫೈನಾನ್ಸ್ ವಿಶೇಷತೆಯೊಂದಿಗೆ 2 ವರ್ಷದ ಪದವಿ ಪ್ರಾರಂಭಿಸಲು ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯ, ಬೆಳಗಾವಿ ವಿಶ್ವವಿದ್ಯಾನಿಲಯದ ಅನುಮೋದನೆ, ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಇಲಾಖೆ
ಹಾಗೂ ಕರ್ನಾಟಕ ಸರಕಾರದಿಂದ ಅನುಮತಿ ದೊರೆತಿರುತ್ತದೆ. ಈ ಎಲ್ಲಾ ಕೋರ್ಸ್‌ಗಳು ಬಂಟಕಲ್ಲಿನ ಸುಂದರ ವಾತಾವರಣದಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ ಕಾರ್ಯಾರಂಭ ಮಾಡಲಿದೆ. ಈ ಎಲ್ಲಾ ಸಾಧನೆಗಳು ಪೂಜ್ಯ ಶ್ರೀ ಸೋದೆ ವಾದಿರಾಜ ಮಠದ ಶ್ರೀಪಾದರ ಕನಸಾದ ಮಧ್ವ ವಿಶ್ವವಿದ್ಯಾನಿಲಯಕ್ಕೆ ಕನಸಿಗೆ ಮತ್ತೊಂದು ಮೆಟ್ಟಿಲಾಗಿದೆ ಎಂದು ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ರತ್ನಕುಮಾರ್ ಬುಧವಾರ ಕಾಲೇಜಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಎಮ್‌ಬಿಎ 2 ವರ್ಷದ ಪದವಿಯಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾನಿಯದಿಂದ 3 ವರ್ಷದ ಪದವಿ ಪೂರ್ಣಗೊಳಿಸಿ ಶೇಕಡಾ 50% ಅಂಕಗಳೊಂದಿಗೆ ಹಾಗೂ KMAT/PGCET/CAT ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಅಭ್ಯರ್ಥಿಗಳು ಪ್ರವೇಶ ಪಡೆಯಬಹುದು.
ಬಿಎಸ್ಸಿ ನರ್ಸಿಂಗ್ 4 ವರ್ಷದ ಕೋರ್ಸ್ ಆಗಿದ್ದು (3 ವರ್ಷ ಮತ್ತು 1 ವರ್ಷ ಇಂಟರ್ನ್‌ಶಿಪ್) ಅಭ್ಯರ್ಥಿಗಳು ಸಂಪೂರ್ಣವಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಪ್ರವೇಶ ಪಡೆಯಬಹುದು. ಅಲೈಡ್ ಹೆಲ್ತ್ ಸೈನ್ಸ್ ಇದು ಕೂಡ 4 ವರ್ಷದ ಕೋರ್ಸ್ ಆಗಿದ್ದು (3 ವರ್ಷ ಮತ್ತು 1 ವರ್ಷ ಇಂಟರ್ನ್‌ಶಿಪ್) ಅಭ್ಯರ್ಥಿಗಳು ವಿಶ್ವವಿದ್ಯಾನಿಯದ ಮಾನದ೦ಡದ ಪ್ರಕಾರ ದ್ವಿತೀಯ ಪಿಯುಸಿಯಲ್ಲಿ ಭೌತಶಾಸ್ತ್ರ, ರಸಾಯನ ಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳಲ್ಲಿ ಒಟ್ಟು ಕನಿಷ್ಠ 50% ಅಂಕವನ್ನು ಪಡೆದಿರಬೇಕು. ಸಾಮಾನ್ಯ ಪ್ರವೇಶ ಪರೀಕ್ಷೆಯ ಅವಶ್ಯಕತೆ ಇರುವುದಿಲ್ಲ
ಈ ಪತ್ರಿಕಾಗೋಷ್ಠಿಯಲ್ಲಿ ವಿದ್ಯಾಸಂಸ್ಥೆಗಳ ಕಾರ್ಯದರ್ಶಿಗಳಾದ ರತ್ನಕುಮಾರ್, ಆಡಳಿತ ಮಂಡಳಿಯ ಸದಸ್ಯರಾದ ಹರೀಶ್ ಬೆಳ್ಮಣ್, ನರ್ಸಿಂಗ್ ಕಾಲೇಜಿನ ನಿಯೋಜಿತ ಪ್ರಾಂಶುಪಾಲೆಯಾದ ಡಾ. ಪ್ಲೇವಿಯಾ ಕ್ಯಾಸ್ಟೆಲಿನೊ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ನಿಯೋಜಿತ ಪ್ರಾಂಶುಪಾಲರಾದ ಡಾ. ನವೀನ್ ಬಲ್ಲಾಳ್, ಶ್ರೀ ಮಧ್ವ ವಾದಿರಾಜ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್, ಆಡಳಿತಾಧಿಕಾರಿ ವಿದ್ಯಾಭಟ್ ಹಾಜರಿದ್ದರು.