ಉಡುಪಿ : ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ನಾಳೆಯೂ ಮಳೆ ಮುಂದುವರೆಯುವ ಸಾಧ್ಯತೆ ಇರುವುದರಿಂದ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯುಸಿ ತರಗತಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ರಜೆ ಘೋಷಿಸಿ ಆದೇಶಿಸಿದ್ದಾರೆ.