ಕಟಪಾಡಿ : ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡಬೆಟ್ಟು ನಿವಾಸಿ ಗೋಪಾಲ ಪಾಣರ ಅವರ ಮನೆಯ ಗೋಡೆ ಭಾರೀ ಮಳೆಗೆ ಕುಸಿದು ಬಿದ್ದಿದೆ.
ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಸಕರು ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಿಂದ ಗರಿಷ್ಠ ಪರಿಹಾರ ನೀಡುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಸುಭಾಸ್ ಬಲ್ಲಾಳ್, ಸವಿತಾ ಎ ಶೆಟ್ಟಿ, ಸುಜಲಾ ಪೂಜಾರಿ, ಕೋಟೆ ಗ್ರಾಮ ಪಂಚಾಯತ್ ಸದಸ್ಯರಾದ ರತ್ನಾಕರ, ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿಗಳಾದ ಗುರುಕೃಪಾ ರಾವ್, ಶಕ್ತಿ ಕೇಂದ್ರದ ಸಂಚಾಲಕರಾದ ನಿತಿನ್, ಬೂತ್ ಅಧ್ಯಕ್ಷರಾದ ಕರುಣಾಕರ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ರಾಮ ಪಾಣರ, ಪಕ್ಷದ ಪ್ರಮುಖರಾದ ಮುರಳಿಧರ ಪೈ, ಶಾಂತ ಪೂಜಾರಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.