ಉಡುಪಿ : ಜಿಲ್ಲೆಯ ಇತಿಹಾಸ ಪ್ರಸಿದ್ಧ ಬೊಬ್ಬರ್ಯ ಕಾಂತೇರಿ ಜುಮಾದಿ ಕಲ್ಕುಡ ಕೊರಗಜ್ಜ ಪರಿವಾರ ದೈವಗಳ ದೈವಸ್ಥಾನದಲ್ಲಿ ಜುಲೈ 22ರಂದು ಬೊಬ್ಬರ್ಯ ಯುವ ಸೇವಾ ಸಮಿತಿ ಹಾಗೂ ಸುಪ್ರಸಾದ್ ಶೆಟ್ಟಿ ಅಭಿಮಾನಿ ಬಳಗ ಹಾಗೂ ಮಮತಾ ಶೆಟ್ಟಿ ಅಭಿಮಾನಿ ಬಳಗ ಉಡುಪಿ ಇವರ ವತಿಯಿಂದ ಕೊರಗಜ್ಜ ದೈವಕ್ಕೆ ದೊಂದಿ ಬೆಳಕಿನ ಸಿರಿ ಸಿಂಗಾರ ಕೋಲ ಸೇವೆ ಜರಗಿತು.
ಈ ಸಂದರ್ಭದಲ್ಲಿ ಬೊಬ್ಬರ್ಯ ಯುವ ಸೇವಾ ಸಮಿತಿ ಗೌರವಾಧ್ಯಕ್ಷರು ಹಾಗೂ ಅಭಿಮಾನಿ ಬಳಗ ಸಂಚಾಲಕರಾದ ವಿನೋದ್ ಶೆಟ್ಟಿ, ಸುಪ್ರಸಾದ್ ಶೆಟ್ಟಿ, ಮಮತಾ ಶೆಟ್ಟಿ, ಸಚಿಂದ್ರ ಶೆಟ್ಟಿ, ಚಂದ್ರಶೇಖರ್ ಶೆಟ್ಟಿ, ಸಮಿತ ಶೆಟ್ಟಿ, ಅಶೋಕ್ ಶೆಟ್ಟಿ, ಸುರೇಶ್ ಶೆಟ್ಟಿ, ಬಾಲಕೃಷ್ಣ ಪೂಜಾರಿ, ಭವಿಷ್, ಪ್ರದೀಪ್ ಶೆಟ್ಟಿ, ಸುಧಾಕರ್ ಶೆಟ್ಟಿ, ಬನ್ನಂಜೆ ಗಣೇಶ್ ದೇವಾಡಿಗ, ಸುಧಾಕರ್ ಮಡಿವಾಳ, ವಿಜಯ ಮಡಿವಾಳ, ಗೌರಿ ಮತ್ತಿತರರು ಉಪಸ್ಥಿತಿಯಿದ್ದರು.