ಕರಾವಳಿಯಲ್ಲಿ ವಿಧ್ವಂಸಕ ಕೃತ್ಯದ ಶಂಕೆ ; ಕಾಪು ತಾಲೂಕಿನಲ್ಲಿ ಪೊಲೀಸರ ಕಟ್ಟೆಚ್ಚರ
Posted On:
27-07-2023 07:01PM
ಕಾಪು : ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಶಂಕಿತ ಭಯೋತ್ಪಾದಕರನ್ನು ಬಂಧಿಸಿದ ಬಳಿಕ ಕರಾವಳಿಯಲ್ಲಿ ವಿಧ್ವಂಸಕ ಚಟುವಟಿಕೆ ನಡೆಯುವ ಸಾಧ್ಯೆತೆಯಿಂದಾಗಿ, ಪೊಲೀಸರು ಜನ ನಿಬಿಡ ಪ್ರದೇಶಗಳ ಮೇಲೆ ಹದ್ದಿನ ಕಣ್ಣಿರಿಸಿದ್ದಾರೆ.
ಕರಾವಳಿಯ ದೇವಸ್ಥಾನ, ಪ್ರವಾಸಿ ಕೇಂದ್ರ ಸೇರಿದಂತೆ ಆಯಾಕಟ್ಟಿನ ಸ್ಥಳಗಳಲ್ಲಿ ಕಳೆದ ನಾಲ್ಕು ದಿನಗಳಿಂದ ತಪಾಸಣೆ ನಡೆಸಲಾಗಿದೆ.
ಈಗಾಗಲೇ ಉಡುಪಿ ಕೃಷ್ಣ ಮಠ, ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳ, ಕಾಪುವಿನ ಮೂರೂ ಮಾರಿಗುಡಿ ಸುತ್ತ ತಪಾಸಣೆ ಮಾಡಲಾಗಿದೆ.
ತಪಾಸಣೆ ಕಾರ್ಯ ನಿರಂತರವಾಗಿ ಮುಂದುವರೆಯಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.