ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಸೌತ್ ಕೆನರಾ ಫೋಟೋಗ್ರಾಫಸ್೯ ಆಸೋಸಿಯೇಶನ್ ಕಾಪು ವಲಯ - 32ನೇ ವಾರ್ಷಿಕ ಮಹಾ ಸಭೆ

Posted On: 29-07-2023 08:54PM

ಕಾಪು : ಸೌತ್ ಕೆನರಾ ಫೋಟೋಗ್ರಾಫಸ್೯ ಆಸೋಸಿಯೇಶನ್ (ರಿ.) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ ಕಾಪು ವಲಯದ 2022 - 23ನೇ ಸಾಲಿನ 32ನೇ ವಾರ್ಷಿಕ ಮಹಾ ಸಭೆ ಜುಲೈ 29 ರಂದು ಕಾಪುವಿನ ಹೋಟೆಲ್ K1 ಸಭಾಭವನದಲ್ಲಿ ಜರಗಿತು.

ಸಭೆಯನ್ನು ಸೌತ್ ಕೆನರಾ ಫೋಟೋಗ್ರಾಫಸ್೯ ಅಸೋಸಿಯೇಶನ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಆನಂದ ಎನ್ ಬಂಟ್ವಾಳ ಉದ್ಘಾಟಿಸಿದರು.

ಸಮ್ಮಾನ : ಸೌತ್ ಕೆನರಾ ಫೋಟೋಗ್ರಾಫಸ್೯ ಅಸೋಸಿಯೇಶನ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಆನಂದ ಎನ್ ಬಂಟ್ವಾಳ, ಪ್ರಧಾನ ಕಾರ್ಯದರ್ಶಿ ನಿತಿನ್ ಬೆಳುವಾಯಿ, ಕೋಶಾಧಿಕಾರಿ ನವೀನ್ ರೈ ಪಂಜಳರನ್ನು ಸಮ್ಮಾನಿಸಲಾಯಿತು.

ಎಸ್ ಕೆ ಪಿ ಎ ಕಾಪು ವಲಯದ ಅಧ್ಯಕ್ಷರಾದ ವಿನೋದ್ ಕಾಂಚನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಎಸ್ ಕೆ ಪಿ ಎ ದ.ಕ. ಮತ್ತು ಉಡುಪಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ನಿತಿನ್ ಬೆಳುವಾಯಿ, ಎಸ್ ಕೆ ಪಿ ಎ ದ.ಕ. ಮತ್ತು ಉಡುಪಿ ಜಿಲ್ಲೆಯ ಕೋಶಾಧಿಕಾರಿ ನವೀನ್ ರೈ ಪಂಜಳ, ಎಸ್ ಕೆ ಪಿ ಎ ದ.ಕ. ಮತ್ತು ಉಡುಪಿ ಜಿಲ್ಲೆಯ ಉಪಾಧ್ಯಕ್ಷ ಪದ್ಮಪ್ರಸಾದ್‌ ಜೈನ್‌, ಎಸ್ ಕೆ ಪಿ ಎ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ವಾಸುದೇವ ರಾವ್, ಎಸ್ ಕೆ ಪಿ ಎ ಕಾಪು ವಲಯದ ಗೌರವಾಧ್ಯಕ್ಷ ರವಿ ಕುಮಾರ್, ಎಸ್ ಕೆ ಪಿ ಎ ದ.ಕ. ಮತ್ತು ಉಡುಪಿ ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಶ್ರೀನಿವಾಸ್ ಐತಾಳ್, ಎಸ್ ಕೆ ಪಿ ಎ ಕಟ್ಟಡ ಸಮಿತಿ ಸದಸ್ಯ ಪ್ರವೀಣ್ ಕುರ್ಕಾಲು, ಎಸ್ ಕೆ ಪಿ ಎ ಕಾಪು ವಲಯದ ಪ್ರಧಾನ ಕಾರ್ಯದರ್ಶಿ ರಾಜೇಶ್, ಉಪಾಧ್ಯಕ್ಷರುಗಳಾದ ಸಚಿನ್ ಉಚ್ಚಿಲ, ರವಿರಾಜ್ ಶೆಟ್ಟಿ, ಕೋಶಾಧಿಕಾರಿ ರಾಘವೇಂದ್ರ ಭಟ್, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.