ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಮಟ್ಟಾರು : ಸಾಮೂಹಿಕ ಶ್ರೀರಾಮ ತಾರಕ ಮಂತ್ರ ಪಠಣ ಮತ್ತು ಎಳ್ಳುಗಂಟು ದೀಪ ಪ್ರಜ್ವಲನಾ ಕಾರ್ಯಕ್ರಮ

Posted On: 05-08-2023 10:15PM

ಮಟ್ಟಾರು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು ನೇತೃತ್ವದಲ್ಲಿ ಅಯೋಧ್ಯೆ ಶ್ರೀರಾಮ ಮಂದಿರದ ಭೂಮಿ ಪೂಜನಾ ದಿವಸದ ಪ್ರಯುಕ್ತ ಲೋಕ ಕಲ್ಯಾಣಕ್ಕಾಗಿ ಸಾಮೂಹಿಕ ಶ್ರೀರಾಮ ತಾರಕ ಮಂತ್ರ ಪಠಣ ಮತ್ತು ಎಳ್ಳುಗಂಟು ದೀಪ ಪ್ರಜ್ವಲನೆ ಕಾರ್ಯಕ್ರಮ ನಡೆಯಿತು.

ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಮಧ್ವರಾಜ ಭಟ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉಧ್ಘಾಟಿಸಿದರು.

ವಿಶ್ವ ಹಿಂದೂ ಪರಿಷದ್ ಮಟ್ಟಾರು ಅಧ್ಯಕ್ಷ ಜಗದೀಶ ಆಚಾರ್ಯ, ಬಜರಂಗದಳ ಸಂಚಾಲಕ ಸುರೇಶ ಆಚಾರ್ಯ, ಮಾತೃಶಕ್ತಿ ಪ್ರಮುಖ್ ಸುಮತಿ ಸಾಲ್ಯಾನ್, ದುರ್ಗಾವಾಹಿನಿ ಸಂಚಾಲಕಿ ಶ್ವೇತಾ ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿಶ್ವ ಹಿಂದೂ ಪರಿಷದ್ ಕಾಪು ಪ್ರಖಂಡ ಅಧ್ಯಕ್ಷ ಜಯಪ್ರಕಾಶ್ ಪ್ರಭು ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಸಾಮೂಹಿಕ ದೀಪ ಪ್ರಜ್ವಲನೆ ಮತ್ತು ಶ್ರೀರಾಮ ತಾರಕ ಮಂತ್ರ ಪಠಣ ನಡೆಯಿತು.