ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಶಿರ್ವ : ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ

Posted On: 06-08-2023 09:17AM

ಶಿರ್ವ : ಇಲ್ಲಿನ ಸಹಕಾರಿ ವ್ಯವಸಾಯಿಕ ಸಂಘ .ನಿ, ಶಿರ್ವ ಹಾಗೂ ಸಹಕಾರ ಭಾರತಿ ಕಾಪು ತಾಲೂಕು ಸಹಯೋಗದಲ್ಲಿ ಕುತ್ಯಾರು ವಿದ್ಯಾದಾಯಿನಿ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ ಜರಗಿತು. ಕಳತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಸರರಾದ ಕೇ೦ಜ ಶ್ರೀಧರ ತಂತ್ರಿ ಯವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.

ಸಹಕಾರ ಭಾರತಿ ಕಾಪು ತಾಲೂಕು ಪ್ರಮುಖರಾದ ಶಶಿಧರ ವಾಗ್ಲೆ ಬೆಳ್ಳೆಯವರು ಸಸಿ ವಿತರಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.

ಸಹಕಾರಿ ಸಂಘದ ಅಧ್ಯಕ್ಷರಾದ ಕುತ್ಯಾರು ಪ್ರಸಾದ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷರಾದ ವಾರಿಜಾ ಆರ್.ಕಲ್ಮಾಡಿ ಹಾಗೂ ಮುಖ್ಯ ಶಿಕ್ಷಕಿ ಶರ್ಮಿಳಾ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಆಚಾರ್ಯ ಅವರು ನಿರ್ವಹಿಸಿದ ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರಾದ ಅಶೋಕ್ ರಾವ್, ನಾರಾಯಣ ನಾಯಕ್, ವಿಲಿಯಂ ಬ್ಯಾಪ್ಟಿಸ್ಟ್ ಮಚಾದೋ, ವಿಜಯ ಪೂಜಾರಿ ಮತ್ತು ಹರಿಣಾಕ್ಷ ಶೆಟ್ಟಿ ಹಾಗೂ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕಿಯರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಮಾವಿನ ಸಸಿಗಳನ್ನು ವಿತರಿಸಲಾಯಿತು.