ಕಳತ್ತೂರು ಶ್ರೀ ಬ್ರಹ್ಮಬೈದರ್ಕಳ ಗರೋಡಿ ಜೀರ್ಣೋದ್ಧಾರ ಪೂರ್ವಭಾವಿ ಸಭೆ
Posted On:
06-08-2023 04:06PM
ಕಾಪು : ಕಳತ್ತೂರು ಶ್ರೀ ಬ್ರಹ್ಮಬೈದರ್ಕಳ ಗರೋಡಿ ಜೀರ್ಣೋದ್ಧಾರದ ಕುರಿತು ರವಿವಾರ ಪೂರ್ವಭಾವಿ ಸಭೆ ಜರಗಿತು.
ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರನ್ನು ಕಳತ್ತೂರು ಶ್ರೀ ಬ್ರಹ್ಮಬೈದರ್ಕಳ ಗರೋಡಿ ವತಿಯಿಂದ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರು, ಹಿರಿಯರು ಹಾಗೂ ಊರ ಸಮಸ್ತರು ಉಪಸ್ಥಿತರಿದ್ದರು.