ಉಚ್ಚಿಲ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಉಡುಪಿ ಮತ್ತು ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲೆಯ ಸಹಯೋಗದಲ್ಲಿ ಮಂಗಳವಾರ ಪಡುಬಿದ್ರಿ ವೃತ್ತ ಮಟ್ಟದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಕೂಟ ಉಚ್ಚಿಲ ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲಾ ಮೈದಾನದಲ್ಲಿ ಜರಗಿತು.
ಕ್ರೀಡಾಕೂಟವನ್ನು ಕಾಪು ಪುರಸಭಾ ಸದಸ್ಯ ಕಿರಣ್ ಆಳ್ವ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಕ್ರೀಡೆಯಲ್ಲಿ ಸೋತರೂ, ಗೆದ್ದರೂ ಅದನ್ನು ಸವಾಲಾಗಿ ಸ್ವೀಕರಿಸಿಬೇಕು. ಗೆದ್ದವರು ಹಿಗ್ಗದೆ, ಸೋತವರು ಕುಗ್ಗದೆ, ಎಲ್ಲರೂ ಕ್ರೀಡಾ ಮನೋಭಾವರಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕೆಂದರು.
ವೇದಿಕೆಯಲ್ಲಿ ಮಹಾಲಕ್ಷ್ಮಿ ಶಾಲಾ ಸಂಚಾಲಕ ಗಂಗಾಧರ್ ಕರ್ಕೆರ ಹೊಸ ಬೆಟ್ಟು, ದಕ್ಷಿಣ ಕನ್ನಡ ಮೊಗವೀರ ಹಿತ ಸಾಧನಾ ವೇದಿಕೆಯ ಅಧ್ಯಕ್ಷ ಸರ್ವೋತ್ತಮ್ ಕುಂದರ್, ಯುವ ಜನ ಕ್ರೀಡಾಧಿಕಾರಿ ರೀತೇಶ್ ಶೆಟ್ಟಿ ಸೂಡ, ಬಡಾ ಗ್ರಾಮ ಪಂಚಾಯತ್ ಸದಸ್ಯೆ ವೆರೋನಿಕ ಬರ್ಬೋಜಾ, ರಕ್ಷಕ- ಶಿಕ್ಷಕ ಸಂಘದ ಅಧ್ಯಕ್ಷೆ ಪೂರ್ಣಿಮಾ ಕರ್ಕೇರಾ, ಮೊಗವೀರ ಹಿತ ಸಾಧನ ವೇದಿಕೆಯ ಕಾರ್ಯದರ್ಶಿ ಸುಧಾಕರ್ ಕರ್ಕೇರ, ಕೋಶಾಧಿಕಾರಿ ವೇದವ್ಯಾಸ ಬಂಗೇರ, ಮಾಜಿ ಸಂಚಾಲಕ ಎನ್ ಡಿ ಬಂಗೇರ, ಸುಜಿತ್ ಕುಮಾರ್, ಶಾಲಾ ಮುಖ್ಯೋಪಾಧ್ಯಾಯನಿ ಶಾಂತ ಶೆಟ್ಟಿಗಾರ್, ಶಾಲಾ ಮುಖ್ಯೋಪಾಧ್ಯಾಯ ಜೋಸೆಫ್ ಪೀಟರ್ ನಜ್ರೆತ್ ಮತ್ತಿತರರು ಉಪಸ್ಥಿತರಿದ್ದರು.