ಕಾಪು : ಪ್ರಥಮ ಹಂತದಲ್ಲಿ ಸುಮಾರು 30 ಕೋಟಿ ರೂಪಾಯಿ ವೆಚ್ಚದಲ್ಲಿ ಬಾಗಲಕೋಟೆಯ ಇಳ್ಕಲ್ ಶಿಲೆಯಿಂದ ನಿರ್ಮಾಣಗೊಳ್ಳುತ್ತಿರುವ ಇತಿಹಾಸ ಪ್ರಸಿದ್ಧ ಕಾಪು ಶ್ರೀ ಹೊಸ ಮಾರಿಗುಡಿ ದೇವಳದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 15 ಲಕ್ಷ ರೂಪಾಯಿ ದೇಣಿಗೆಯನ್ನು ಹಸ್ತಾಂತರಿಸಲಾಯಿತು.
ಕ್ಷೇತ್ರದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ ವಾಸುದೇವ ಶೆಟ್ಟಿ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಜಿಲ್ಲಾ ನಿರ್ದೇಶಕರಾದ ಡಿ ಶಿವಾನಂದ ಪ್ರಭುರವರಿಗೆ ನಡೆಯುತ್ತಿರುವ ಕಾಮಗಾರಿಯ ಬಗ್ಗೆ ಮತ್ತು ಸಮಗ್ರ ಜೀರ್ಣೋದ್ಧಾರದ ಮಾಹಿತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯಾ, ಕ್ಷೇತ್ರದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರು ಮತ್ತು ಗೌರವ ಸಲಹೆಗಾರರಾದ ರತ್ನಾಕರ ಶೆಟ್ಟಿ ನಡಿಕೆರೆ, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರುಗಳಾದ ಗಂಗಾಧರ ಸುವರ್ಣ, ದೇವಿಪ್ರಸಾದ್ ಶೆಟ್ಟಿ ಬೆಳಪು, ಮಾಧವ ಆರ್. ಪಾಲನ್, ಮನೋಹರ ಶೆಟ್ಟಿ, ಆರ್ಥಿಕ ಸಮಿತಿಯ ಪ್ರಧಾನ ಸಂಚಾಲಕರಾದ ಉದಯ ಸುಂದರ್ ಶೆಟ್ಟಿ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕರಾದ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಗ್ರಾಮ ಸಮಿತಿಯ ಪ್ರಧಾನ ಸಂಚಾಲಕರಾದ ಅರುಣ್ ಶೆಟ್ಟಿ ಪಾದೂರು, ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಚಂದ್ರಶೇಖರ್ ಅಮೀನ್, ರವೀಂದ್ರ ಎಂ, ಬಾಬು ಮಲ್ಲಾರ್, ಕಾಪು ಪುರಸಭಾ ಸದಸ್ಯರಾದ ಅನಿಲ್ ಕುಮಾರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕಿನ ಯೋಜನಾಧಿಕಾರಿ ಜಯಂತಿ, ಕಾಪು ವಲಯದ ಮೇಲ್ವಿಚಾರಕರಾದ ಸರಿತಾ, ಸಿದ್ದಿದಾತ್ರಿ ತಂಡದ ಸಂಚಾಲಕರಾದ ಜಗದೀಶ್ ಮೆಂಡನ್ ಮತ್ತು ಪ್ರಬಂಧಕರಾದ ಗೋವರ್ಧನ್ ಸೇರಿಗಾರ್ ಉಪಸ್ಥಿತರಿದ್ದರು.