ಬೆಳಪು ವ್ಯವಸಾಯ ಸಹಕಾರಿ ಸಂಘ : ವಜ್ರ ಮಹೋತ್ಸವ ಸಂಭ್ರಮಾಚರಣೆ, ನವೀಕೃತ ಶಾಖೆ, ಸಹಕಾರಿ ಮಹಲ್ ಉದ್ಘಾಟನೆಯ ಆಮಂತ್ರಣ ಪತ್ರಿಕೆ ಬಿಡುಗಡೆ
Posted On:
12-08-2023 04:54PM
ಬೆಳಪು : ಇಲ್ಲಿನ ವ್ಯವಸಾಯ ಸಹಕಾರಿ ಸಂಘ ಪಣಿಯೂರು ಸ್ವತಂತ್ರವಾಗಿ ಕಾರ್ಯಾಚರಣೆ ಮಾಡುತ್ತಿರುವ ಸಹಕಾರಿ ಸಂಘವಾಗಿದೆ.
ಬಡಾ, ಎಲ್ಲೂರು, ಬೆಳಪು ಗ್ರಾಮಸ್ಥರ ಆರ್ಥಿಕ ಸಬಲೀಕರಣದ ಉದ್ಧೇಶ ಹೊಂದಿ ಸ್ಥಾಪಿತವಾದ ಸಂಸ್ಥೆ ಇದಾಗಿದೆ. ಸಹಕಾರಿ ಸಂಘವು 4,350 ಸದಸ್ಯರನ್ನು ಹೊಂದಿದ್ದು, 50 ಕೋಟಿ ಠೇವಣಾತಿ ಹೊಂದಿ, 48 ಕೋಟಿ ರೂಪಾಯಿ ಸಾಲವನ್ನು ನೀಡಿದೆ. ಎ ಶ್ರೇಣಿಯ ಬ್ಯಾಂಕಿಂಗ್ ಮಾನ್ಯತೆ ಹೊಂದಿದ ಸಹಕಾರಿ ಸಂಘವಾಗಿದೆ ಎಂದು ಬೆಳಪು ವ್ಯವಸಾಯ ಸಹಕಾರಿ ಸಂಘ ಪಣಿಯೂರು ಇದರ ಅಧ್ಯಕ್ಷರಾದ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು ಪಣಿಯೂರು ಸಹಕಾರಿ ಸಂಘದ ಸಭಾಂಗಣದಲ್ಲಿ ಮಾಹಿತಿ ನೀಡಿದರು.
ಅವರು ಸೆಪ್ಟೆಂಬರ್ 2, ಶನಿವಾರದಂದು ಬಡಾ ಗ್ರಾಮ ಉಚ್ಚಿಲ ಶಾಖೆಯ ಸಹಕಾರಿ ಮಹಲ್ ನಲ್ಲಿ ಜರಗಲಿರುವ ವಜ್ರ ಮಹೋತ್ಸವ ಸಂಭ್ರಮಾಚರಣೆ, ನವೀಕೃತ ಶಾಖೆ ಹಾಗೂ ಸಹಕಾರಿ ಮಹಲ್ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು.
ವಜ್ರ ಮಹೋತ್ಸವ ಸವಿ ನೆನಪಿನ ಕಟ್ಟಡ ಸಹಕಾರಿ ಮಹಲ್, ಡಾ| ಎಂ ಎನ್ ರಾಜೇಂದ್ರ ಕುಮಾರ್ ಕಾನ್ಪರೆನ್ಸ್ ಹಾಲ್, ಸಮೃದ್ಧಿ ಸಭಾಂಗಣ, ರೈತ ಬಂಧು ಕೃಷಿ ಸಲಕರಣೆ ಕೇಂದ್ರ, ರೈತ ಮಾರುಕಟ್ಟೆ ಮತ್ತು ಗೋದಾಮು ಹಾಗೂ ಪಡಿತರ ವಿತರಣಾ ವಿಭಾಗ, ಸಹಕಾರಿ ಸಭಾಂಗಣ, ನವೋದಯ ಸಭಾಂಗಣ, ನವೀಕೃತ ಹವಾನಿಯಂತ್ರಿತ ಬ್ಯಾಂಕಿಂಗ್ ಶಾಖೆ, ಸೇಫ್ ಲಾಕರ್ - ಭದ್ರತಾ ಕೊಠಡಿ ಉದ್ಘಾಟನೆ, ಸಂಸ್ಥೆಯ ಆರಂಭದಿಂದ ಇಂದಿನವರೆಗಿನ ಮಾಹಿತಿಯನ್ನೊಳಗೊಂಡ
ವಜ್ರದರ್ಪಣ ಸ್ಮರಣ ಸಂಚಿಕೆ ಬಿಡುಗಡೆಯು ನಡೆಯಲಿದೆ ಎಂದರು.
ಈ ಸಂದರ್ಭ ನಿರ್ದೇಶಕರುಗಳಾದ ಪಾಂಡು ಶೆಟ್ಟಿ, ಗೋಪಾಲ ಪೂಜಾರಿ, ಸೈಮನ್ ಡಿಸೋಜ, ಪಾಂಡು ಎಂ ಶೇರಿಗಾರ್, ಅಲಿಯಬ್ಬ, ದ್ಯುಮಣಿ ಆರ್ ಭಟ್, ಬಾಲಕೃಷ್ಣ ಎಸ್ ಆಚಾರ್ಯ, ಶೋಭಾ ಬಿ ಭಟ್, ಮೀನಾ ಪೂಜಾರ್ತಿ, ವಿಮಲ ಅಂಚನ್, ಅನಿತಾ ಆನಂದ, ದ.ಕ.ಜಿ.ಕೇ.ಸ ಬ್ಯಾಂಕ್ ಪ್ರತಿನಿಧಿ ಬಾಲಕೃಷ್ಣ ಭಟ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಲೋಚನಾ ದೇವಾಡಿಗ ಉಚ್ಚಿಲ ಶಾಖಾ ಪ್ರಬಂಧಕ ನವೀನ್ ಕುಮಾರ್, ಸತೀಶ್ ಗುಡ್ಡೆಚ್ಚಿ ಉಪಸ್ಥಿತರಿದ್ದರು.