ಕಾಪು : ಪಡುಕುತ್ಯಾರು ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದಿಂದ ಆಷಾಢ ಮಾಸದ ಆಚರಣೆ
Posted On:
12-08-2023 05:12PM
ಕಾಪು : ಶ್ರೀ ದುರ್ಗಾ ಮಹಿಳಾ ಮಂಡಳಿ ಪಡುಕುತ್ಯಾರು ಮತ್ತು ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘ ಇದರ ವತಿಯಿಂದ ಆಷಾಢ ಮಾಸದ ಆಚರಣೆಯು ಶ್ರೀ ದುರ್ಗಾ ದೇವಿ ಮಂದಿರದಲ್ಲಿ ಆಗಸ್ಟ್ 6ರಂದು ಜರಗಿತು.
ಆಷಾಢ ಮಾಸದ ಆಚರಣೆಯ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಮಹಿಳಾ ಮಂಡಳಿ ಅಧ್ಯಕ್ಷರಾದ ಜ್ಯೋತಿ ಪ್ರಕಾಶ್ ಆಚಾರ್ಯರವರು ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು ತುಳುನಾಡಿನ ಸಂಸ್ಕೃತಿಯಂತೆ ವಿವಿಧ ಖಾದ್ಯಗಳಲ್ಲಿ ಔಷಧೀಯ ಗುಣಗಳು ಹೊಂದಿದ್ದು ಆರೋಗ್ಯಕ್ಕೆ ಒಳ್ಳೆಯದು, ಮಕ್ಕಳು ಈ ವಿಚಾರವನ್ನು ತಿಳಿದುಕೊಂಡು ಆಹಾರ ಪದ್ಧತಿಯನ್ನು ಮುಂದುವರಿಸಿಕೊಂಡು ಹೋದರೆ ಆರೋಗ್ಯ ಸಮಸ್ಯೆ ಬರುವುದಿಲ್ಲ ಎoದು ತಿಳಿಸಿದರು.
ಜ್ಯೋತಿ ಪಕಾಶ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಆಷಾಢ ಮಾಸದ ಆಚರಣೆಯ ಪ್ರಾಮುಖ್ಯತೆಯನ್ನು ಬಗ್ಗೆ ಹಲವಾರು ಸದಸ್ಯರು ತಮ್ಮ ಅನಿಸಿಕೆ, ಅಭಿಪ್ರಾಯವನ್ನು ತಿಳಿಸಿದರು.
ಸಭೆಯಲ್ಲಿ ಕೂಡುವಳಿಕೆಯ ಎಲ್ಲಾ ಸದಸ್ಯರು, ಸಂಘದ ಪದಾಧಿಕಾರಿಗಳು ಸದಸ್ಯರು, ಮಹಿಳಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
30 ವಿವಿಧ ಖಾದ್ಯಗಳನ್ನು ತಯಾರಿಸಲಾಗಿತ್ತು.
ವೇದಿಕೆಯಲ್ಲಿ ಪಡುಕುತ್ಯಾರು ಗ್ರಾಮ ಮೋಕ್ತೇಸರರು, ಸಂಘದ ಗೌರವ ಸಲಹೆಗಾರರಾದ ಪ್ರಕಾಶ ಆಚಾರ್ಯ, ಶ್ರೀ ವಿಶ್ವಕರ್ಮಸಮಾಜ ಸೇವಾ ಸಂಘದ ಅಧ್ಯಕ್ಷರಾದ ನಾಗೇಶ್ ಆರ್ ಆಚಾರ್ಯ, ಕಾರ್ಯಾಧ್ಯಕ್ಷರಾದ ಕಾಪು ಜಯರಾಮ ಆಚಾರ್ಯ, ಮಹಿಳಾ ಮಂಡಳಿಯ ಉಪಾಧ್ಯಕ್ಷರಾದ ಚಂದ್ರಕಲ ಎನ್ ಆಚಾರ್ಯ, ಕಾರ್ಯದರ್ಶಿ ಸುನೀತಾ ಎಸ್ ಆಚಾರ್ಯ, ಹಿರಿಯ ಮಹಿಳಾ ಸದಸ್ಯರಾದ ಶಾರದಾ ಎಸ್ ಆಚಾರ್ಯ, ಕಾರ್ಯದರ್ಶಿ ದಿನೇಶ್ ಎಸ್ ಆಚಾರ್ಯ, ಶಕುಂತಲಾ ಜಿ ಆಚಾರ್ಯ ಉಪಸ್ಥಿತರಿದ್ದರು.
ಸುನಿತಾ ಎಸ್ ಆಚಾರ್ಯರವರ ಸ್ವಾಗತಿಸಿದರು. ಶ್ರೀಲತಾ ಪಿ ಆಚಾರ್ಯ ವಂದಿಸಿದರು. ಸೌಮ್ಯ ಡಿ ಆಚಾರ್ಯ ಮತ್ತು ಗಂಗಾಧರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.