ಪಡುಬಿದ್ರಿ ರೋಟರಿ ಕ್ಲಬ್ : ಆಟಿದ ಗಮ್ಮತ್ತ್
Posted On:
13-08-2023 05:11PM
ಪಡುಬಿದ್ರಿ : ತುಳುವ ಜನರು ಹೆಣ್ಣು, ಹೊನ್ನು, ಮಣ್ಣು ಮಾಯೆ ಎನ್ನುವವರಲ್ಲ. ಹೆಣ್ಣು ಸತ್ಯ, ಮಣ್ಣು ಸತ್ಯ ಎನ್ನುವವರು ತುಳುನಾಡಿನವರು. ಇಲ್ಲಿಯ ಆಹಾರಪದ್ಧತಿ, ಕೆಲಸ ಕಾರ್ಯಗಳು, ಕಣ್ಣೀರಿನ ಕತೆಗಳು ನಮಗೆ ಇಂದು ಮಾದರಿಯಾಗಬೇಕಿದೆ. ತುಳುವರ ಆಟಿ ಮತ್ತು ಮಾಯಿ ತಿಂಗಳು ತುಳುವರಿಗೆ ಕೃಷಿ ಬದುಕು ಕಟ್ಟಿಕೊಡುವ ತಿಂಗಳಾಗಿದೆ ಎಂದು ಮೂಡಬಿದ್ರಿಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಡಾ. ಸುಧಾರಾಣಿ ಹೇಳಿದರು.
ಅವರು ರೋಟರಿ ಕ್ಲಬ್, ಇನ್ನರ್‌ವೀಲ್ ಕ್ಲಬ್, ರೋಟರಿ ಸಮುದಾಯದಳ, ರೋಟರ‌್ಯಾಕ್ಟ್ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ ಪಡುಬಿದ್ರಿ
ಸುಜಾತಾ ಆಡಿಟೋರಿಯಂನಲ್ಲಿ ನಡೆದ ಆಟಿದ ಗಮ್ಮತ್ತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಉಪನ್ಯಾಸಕಿ ಡಾ. ಸುಧಾರಾಣಿ ಅವರನ್ನು ಸನ್ಮಾನಿಸಲಾಯಿತು.
ಪಡುಬಿದ್ರಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ವೈ. ಸುಕುಮಾರ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ನವೀನ್‌ಚಂದ್ರ ಜೆ. ಶೆಟ್ಟಿ, ರೋಟರಿ ಕ್ಲಬ್ ಸಹಾಯಕ ಗವರ್ನರ್ ಶೈಲೇಂದ್ರ ರಾವ್ ಮಾತನಾಡಿದರು.
ರೋಟರಿ ಕ್ಲಬ್ ಅಧ್ಯಕ್ಷ ಸಂತೋಷ್ ಪಡುಬಿದ್ರಿ ಅಧ್ಯಕ್ಷತೆ ವಹಿಸಿದ್ದರು. ಇನ್ನರ್‌ವೀಲ್ ಕ್ಲಬ್ ಅಧ್ಯಕ್ಷೆ ನಮೃತಾ ಮಹೇಶ್, ರೋಟರ‌್ಯಾಕ್ಟ್ ಕ್ಲಬ್‌ನ ಪ್ರತಿನಿಧಿ ಶೃತಿ ಶೆಣೈ, ರೋಟರಿ ಸಮುದಾಯ ದಳದ ಅಧ್ಯಕ್ಷ ರಚನ್ ಸಾಲ್ಯಾನ್, ರೋರ‍್ಯಾಕ್ಟ್ ಕ್ಲಬ್ ಅಧ್ಯಕ್ಷ ತನಿಷಾ ಜಿ. ಕುಕ್ಯಾನ್, ರೋಟರಿ ಕ್ಲಬ್ ಕಾರ್ಯದರ್ಶಿ ಪವನ್ ಸಾಲ್ಯಾನ್, ಇನ್ನರ್‌ವೀಲ್ ಕ್ಲಬ್ ಕಾರ್ಯದರ್ಶಿ ಮನೋರಮ ಮೇಘನಾಥ್, ರೋಟರಿ ಸಮುದಾಯ ದಳದ ಕಾರ್ಯದರ್ಶಿ ಪ್ರತೀಕ್ ಶೆಟ್ಟಿ, ರೋಟರ‌್ಯಾಕ್ಟ್ ಕ್ಲಬ್ ಕಾರ್ಯದರ್ಶಿ ಪ್ರತೀಕ್ ಆಚಾರ್ಯ, ಕಾರ್ಯಕ್ರಮ ನಿರ್ದೇಶಕರಾದ ಪಿ.ಕೃಷ್ಣ ಬಂಗೇರ, ಶುಭ ದಿನೇಶ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಬಳಿಕ ಇನ್ನರ್‌ವೀಲ್ ಕ್ಲಬ್‌ನ ಸದಸ್ಯರಿಂದ ಹಾಗೂ ಮಕ್ಕಳಿಂದ ತುಳುನಾಡಿನ ಸಂಸ್ಕೃತಿ ಬಿಂಬಿಸುವ ನೃತ್ಯಗಳು, ಮನೆಗಳಲ್ಲಿ ತಯಾರಿಸಿದ ವಿವಿಧ ಬಗೆಯ ಆಹಾರಗಳು ವಿಶೇಷವಾಗಿತ್ತು.
ಶಿಕ್ಷಕ ಬಿ.ಎಸ್. ಆಚಾರ್ಯ ನೇತೃತ್ವದಲ್ಲಿ
ತುಳುನಾಡಿನ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ರಸಪ್ರಶ್ನೆ ಸ್ಪರ್ಧೆ ನಡೆಯಿತು.
ಕಾರ್ಯಕ್ರಮದಲ್ಲಿ ಸಂತೋಷ್ ಪಡುಬಿದ್ರಿ ಸ್ವಾಗತಿಸಿದರು. ಪವನ್ ಸಾಲ್ಯಾನ್ ವಂದಿಸಿದರು. ರಾಜೇಶ್ ಶೇರಿಗಾರ್ ಕಾರ್ಯಕ್ರಮ ನಿರೂಪಿಸಿದರು.