ಕೈಪುಂಜಾಲು ಮೀನುಗಾರರ ಪ್ರಾಥಮಿಕ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ
Posted On:
13-08-2023 05:26PM
ಕಾಪು : ಕೈಪುಂಜಾಲು ಮೀನುಗಾರರ ಪ್ರಾಥಮಿಕ ವಿವಿಧೋದ್ದೇಶ ಸಹಕಾರ ಸಂಘ (ನಿ.) ಇದರ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಭಾನುವಾರ ಜರಗಿತು.
ಈ ಸಂದರ್ಭ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಅವರನ್ನು ಕೈಪುಂಜಾಲು ಮೀನುಗಾರರ ಪ್ರಾಥಮಿಕ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಕೈಪುಂಜಾಲು ಮೀನುಗಾರರ ಪ್ರಾಥಮಿಕ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.