ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಪಲಿಮಾರು : ಹೊೖಗೆ ಫ್ರೆಂಡ್ಸ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Posted On: 13-08-2023 05:50PM

ಪಲಿಮಾರು : ಇಲ್ಲಿನ ಹೊೖಗೆ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ಫಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಗಾಯತ್ರಿ ಡಿ ಪ್ರಭು, ಪಲಿಮಾರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗ್ರೆಟ್ಟಾ ಮೊರಸ್, ಉಪನ್ಯಾಸಕಿ ವಿಜಯಲಕ್ಷ್ಮಿ , ಪ್ರೌಢಶಾಲಾ ವಿಭಾಗದ ಹಿರಿಯ ಸಹ ಶಿಕ್ಷಕಿ ಸುನಿತಾ, ಕನ್ನಡ ಭಾಷಾ ಶಿಕ್ಷಕರಾದ ಸುಧಾಕರ್ ಶೆಣೈ, ದೈಹಿಕ ಶಿಕ್ಷಣ ಶಿಕ್ಷಕಿ ಅಮೃತಾ, ಹೊೖಗೆ ಫ್ರೆಂಡ್ಸ್ ನ ಅಧ್ಯಕ್ಷ ರಿತೇಶ್ ದೇವಾಡಿಗ, ಕಾರ್ಯದರ್ಶಿ ಸತೀಶ ಕುಮಾರ್, ಸದಸ್ಯರಾದ ದಿನೇಶ್, ಅಂಕಿತ್, ಜ್ಞಾನೇಶ್, ಅರುಣ್, ನಿಕೇಶ್ ಪುತ್ರನ್, ಪುರುಷೋತ್ತಮ, ಪಲಿಮಾರು ಸರಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಪ್ರಸಾದ್ ಪಲಿಮಾರು ಉಪಸ್ಥಿತರಿದ್ದರು.