ಬೆಳಪು : ಇಲ್ಲಿ ನಿರ್ಮಾಣಗೊಳ್ಳಲಿರುವ ಐ.ಪಿ.ಎಲ್ ಮಾದರಿಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಕ್ರಿಕೆಟ್ ಮಂಡಳಿಯ ಕಾರ್ಯದರ್ಶಿ ರಜನೀಶ್ ರವರ ತಂಡ ಸ್ಥಳ ಪರಿಶೀಲನೆ ನಡೆಯಿತು.
ಗ್ರಾಮ ಅಭಿವೃದ್ಧಿಯ ರುವಾರಿ ಡಾ. ದೇವಿಪ್ರಸಾದ್ ಶೆಟ್ಟಿ ಅವರ ಮುತುವರ್ಜಿಯಲ್ಲಿ ಸ್ಥಳ ಪರಿಶೀಲನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಸರ್ವೆ ಅಧಿಕಾರಿಗಳು, ತಾಲೂಕು ಸರ್ವೆ ಅಧಿಕಾರಿಗಳು, ಗ್ರಾಮ ಕರಣಿಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಉಪಸ್ಥಿತರಿದ್ದರು.