ಪಡುಬಿದ್ರಿ : ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಸೋಮವಾರ ಪಡುಬಿದ್ರಿ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿದರು.
ಶಾಸಕರು ಪಂಚಾಯತ್ ನ 25 ಶೇಕಡಾ ನಿಧಿಯಿಂದ ಪರಿಶಿಷ್ಟ ಜಾತಿ ಅವರಿಗೆ ಮಂಜೂರಾದ ಮನೆ ರಿಪೇರಿಯ ಸಹಾಯಧನ ಹಾಗೂ ಶೇಕಡಾ 5 ನಿಧಿಯಿಂದ ಅಂಗವಿಕಲರಿಗೆ ಸಹಾಯಧನ, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.
ಪಡುಬಿದ್ರಿ ಗ್ರಾಮ ಪಂಚಾಯತ್ ವತಿಯಿಂದ ಶಾಸಕರನ್ನು ಅಭಿನಂದಿಸಲಾಯಿತು.
ಈ ಸಂದರ್ಭ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ, ಉಪಾಧ್ಯಕ್ಷೆ ಯಶೋದಾ, ಪಡುಬಿದ್ರಿ ಪೋಲಿಸ್ ಉಪ ನಿರೀಕ್ಷಕರಾದ ಪ್ರಸನ್ನ, ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ರಾಜಶ್ರೀ ಕಿಣಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಪಂಚಾಕ್ಷರಿ, ಗ್ರಾಮ ಆಡಳಿತಾಧಿಕಾರಿಗಳಾದ ಮಥಾಯಿ, ಪಡುಬಿದ್ರಿ ಗ್ರಾಮ ಪಂಚಾಯತ್ ಸರ್ವ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.