ಪಡುಬಿದ್ರಿ : ಶ್ರೀ ಮಹಾಗಣಪತಿ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟ ಪಡುಬಿದ್ರಿ ಇದರ ನೂತನ ಕಟ್ಟಡದ ಉದ್ಘಾಟನೆಯನ್ನು ಸೋಮವಾರ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿ ಶುಭ ಹಾರೈಸಿದರು.
ಈ ಸಂದರ್ಭ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ, ಉಪಾಧ್ಯಕ್ಷರಾದ ಯಶೋದಾ, ಕಾಪು ತಾಲೂಕು ಸಂಜೀವಿನಿ ವಲಯ ಮೇಲ್ವಿಚಾರಕರಾದ ಸುಜಾತ, ಪಡುಬಿದ್ರಿ ಶ್ರೀ ಮಹಾಗಣಪತಿ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟದ ಅಧ್ಯಕ್ಷರಾದ ಸುಮತಿ, ಪಡುಬಿದ್ರಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಪಂಚಾಕ್ಷರಿ ಹಿರೇಮಟ್, ಕಾರ್ಯದರ್ಶಿಗಳಾದ ರೂಪಲತಾ ಉಪಸ್ಥಿತರಿದ್ದರು.