ಉಡುಪಿ : ಶೈಕ್ಷಣಿಕ ಕ್ಷೇತ್ರ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ರಾತ್ರಿ ಇಡೀ ಕಾರ್ಯಾಚರಿಸುತ್ತಿದ್ದ ಬಾರ್ ಮತ್ತು ಪಬ್ ಗಳ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಂಡಿರುವುದು ಶ್ಲಾಘನೀಯ.
ಅದೇ ರೀತಿ ಮಣಿಪಾಲದ ಕೆಲವು ಕಡೆ ಹೋಟೆಲ್ ವ್ಯಾಪಾರದ ನೆಪದಲ್ಲಿ ತಡರಾತ್ರಿವರೆಗೂ ವ್ಯಾಪಾರ ಮಾಡಿಕೊಂಡು ಅಲ್ಲಿ ಅನೈತಿಕ ಚಟುವಟಿಕೆಗಳ ಕೇಂದ್ರವಾಗಿದ್ದು ಇದರ ವಿರುದ್ಧವೂ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದು ಪರಿಷದ್ ಬಜರಂಗದಳ ಉಡುಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಆಗ್ರಹಿಸಿದ್ದಾರೆ.