ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಬಂಟಕಲ್ಲು : ಆಟೋ ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘ - ಸ್ವಾತಂತ್ರ್ಯ ದಿನಾಚರಣೆ

Posted On: 15-08-2023 09:55AM

ಬಂಟಕಲ್ಲು : ಆಟೋ ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘ (ರಿ.) ಬಂಟಕಲ್ಲು ಇದರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಜರಗಿತು.

ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತನ್ ಕುಮಾರ್ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.

ಆಟೋ ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘ (ರಿ.) ಬಂಟಕಲ್ಲು ಗೌರವಾಧ್ಯಕ್ಷ ಮಾಧವ ಕಾಮತ್, ನಾಗರಿಕ ಸೇವಾ ಸಮಿತಿ (ರಿ.) ಬಂಟಕಲ್ಲು ಅಧ್ಯಕ್ಷ ಕೆ ಆರ್ ಪಾಟ್ಕರ್, ಕಾರು ಚಾಲಕರ ಹಾಗೂ ಮಾಲಕರ ಸಂಘ ಬಂಟಕಲ್ಲು ಅಧ್ಯಕ್ಷ ಉಮೇಶ್ ರಾವ್, ನಿವೃತ್ತ ಶಿಕ್ಷಕರಾದ ಪುಂಡಲೀಕ ಮರಾಠೆ, ಆಟೋರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘ (ರಿ.) ಬಂಟಕಲ್ಲು ಅಧ್ಯಕ್ಷ ಮಂಜುನಾಥ್ ಪೂಜಾರಿ ಉಪಸ್ಥಿತರಿದ್ದರು.

ಗೋಪಾಲ್ ದೇವಾಡಿಗ ಸ್ವಾಗತಿಸಿದರು. ಡೆನಿಸ್ ಡಿಸೋಜ ವಂದಿಸಿದರು.