ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು ತಾಲೂಕು ಮಟ್ಟದ 77 ನೇ ಸ್ವಾತಂತ್ರ್ಯ ದಿನಾಚರಣೆ

Posted On: 15-08-2023 11:53AM

ಕಾಪು : ತಾಲೂಕು ಮಟ್ಟದ 77 ನೇ ಸ್ವಾತಂತ್ರೋತ್ಸವ ಕಾರ್ಯಕ್ರಮ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರಗಿತು.

ಕಾಪು ತಹಶೀಲ್ದಾರರಾದ ನಾಗರಾಜ್ ವಿ ನಾಯ್ಕಡ ಅವರು ಧ್ವಜಾರೋಹಣ ನೆರವೇರಿಸಿದರು.

ಸನ್ಮಾನ : ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ನವೀನ್ ಕುಮಾರ್ ಹೆಚ್.ಡಿ, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ಸಂತೋಷ್, ಕಾಪು ವೃತ್ತ ನಿರೀಕ್ಷಕರಾದ ಪೂವಯ್ಯ ಹಾಗೂ ಕಾಪು ಪುರಸಭೆಯ ಸದಸ್ಯರು ಮತ್ತು ಕಾಪು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.