ಕಟಪಾಡಿ : ಎಸ್.ವಿ.ಎಸ್ ಹಿರಿಯ ಪ್ರಾಥಮಿಕ ಶಾಲೆ -77ನೇ ವರ್ಷದ ಸ್ವಾತಂತ್ರ್ಯೋತ್ಸವ
Posted On:
15-08-2023 04:35PM
ಕಟಪಾಡಿ : ಎಸ್.ವಿ.ಎಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77 ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಇಂದು ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಡಾ| ದಯಾನಂದ ಪೈ ಧ್ವಜಾರೋಹಣವನ್ನು ನೆರವರಿಸಿ 77ನೇ ಸ್ವಾತಂತ್ರ್ಯೋತ್ಸವಕ್ಕೆ ಶುಭ ಹಾರೈಸಿದರು.
ಸಾಮಾಜಿಕ ಆರ್ಥಿಕ ಸದೃಢತೆಯಿಂದಾಗಿ ನಿಜವಾದ ಸ್ವಾತಂತ್ರ್ಯ ಪ್ರಾಪ್ತಿಯಾಗುತ್ತದೆ ಅದಕ್ಕೆ ಎಲ್ಲಾ ವಿದ್ಯಾರ್ಥಿಗಳು ಶ್ರಮಿಸುವಂತಾಗಬೇಕೆಂದು ಅವರು ತಿಳಿಸಿದರು.
ಶಾಲಾ ಮುಖ್ಯ ಶಿಕ್ಷಕರಾದ ಸುಬ್ರಹ್ಮಣ್ಯ ತಂತ್ರಿ ಇವರು ಅಧ್ಯಕ್ಷತೆ ವಹಿಸಿದ್ದರು.
ಈ ಸಂಧರ್ಭದಲ್ಲಿ ಮುಖ್ಯಶಿಕ್ಷಕರಾದ ಸುಬ್ರಹ್ಮಣ್ಯ ತಂತ್ರಿ, ಶಾಲಾ ಸಿಬ್ಬಂದಿ ವರ್ಗ, ಶಾಲಾ ಶಿಕ್ಷಕರು,ಕಾಲೇಜಿನ ಉಪನ್ಯಾಸಕರು, ಎಸ್.ವಿ.ಎಸ್ ಹೈಸ್ಕೂಲ್ ಕಾಲೇಜ್ ಫ್ರೆಂಡ್ಸ್ ನ ಅಧ್ಯಕ್ಷರಾದ ಸತೀಶ್ ಕುಮಾರ್, ಯುವ ಜನ ಸೇವಾ ಸಂಘದ ಕಾರ್ಯದರ್ಶಿಯಾದ ಸಂತೋಷ್, ಎನ್.ಎಸ್ ಕಟಪಾಡಿ, ಕೋಶಾಧಿಕಾರಿ ಸನತ್ ಕುಮಾರ್ ಉಪಸ್ಥಿತರಿದ್ದರು.
ಯುವಜನ ಸೇವಾ ಸಂಘ ಏಣಗುಡ್ಡೆ ಕಟಪಾಡಿ ಇವರ ವತಿಯಿಂದ ನೀಡಲಾದ ಸಿಹಿತಿಂಡಿಯನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು.
ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಮಾಜ ವಿಜ್ಞಾನ ಶಿಕ್ಷಕಿ ಜಯಲಕ್ಷ್ಮಿ ಕೆ ಭಾರತೀಯ ಸಂವಿಧಾನ ಬಗ್ಗೆ, ಮಕ್ಕಳಹಕ್ಕು, ಕರ್ತವ್ಯ ಹಾಗೂ ರಕ್ಷಣೆಯ ಬಗ್ಗೆ ವಿಶೇಷವಾದ ಮಾಹಿತಿ ನೀಡಿದರು.