ಕಾಪು : ಫ್ರೆಂಡ್ಸ್ ಗ್ರೂಪ್ ವತಿಯಿಂದ ಕುಶಲಶೇಖರ ಆಡಿಟೋರಿಯಂನಲ್ಲಿ ಮಂಗಳವಾರ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಶೇಖರ ಶೆಟ್ಟಿ ಧ್ವಜಾರೋಹಣಗೈದರು.
ರಂಗನಾಥ ಶೆಟ್ಟಿ ನೇತೃತ್ವದಲ್ಲಿ ಫ್ರೆಂಡ್ಸ್ ಗ್ರೂಪ್ ವತಿಯಿಂದ ಸ್ವಚ್ಛತಾ ಅಭಿಯಾನ ನಡೆಯಿತು.
ಕಾರ್ಯಕ್ರಮದಲ್ಲಿ ಶೇಖರ ಶೆಟ್ಟಿ, ಸುಂದರ ಶೆಟ್ಟಿ ಆನಂದಿ ಶೆಟ್ಟಿ, ರಂಗನಾಥ ಶೆಟ್ಟಿ ಭಾಗವಹಿಸಿದ್ದರು.
ಫ್ರೆಂಡ್ಸ್ ಗ್ರೂಪ್ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.
ಶಶಾಂಕ್ ಸ್ವಾಗತಿಸಿದರು. ಕಾವ್ಯ ವಂದಿಸಿದರು.