ಬೆಳಪು : ಇಲ್ಲಿನ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆದಿದ್ದು, ಅಧ್ಯಕ್ಷರಾಗಿ ಹತ್ತನೇ ಬಾರಿ ಡಾ|| ದೇವಿ ಪ್ರಸಾದ್ ಶೆಟ್ಟಿ ಯವರು ಅವಿರೋಧವಾಗಿ ಆಯ್ಕೆಯಾದರು.
ಉಪಾಧ್ಯಕ್ಷೆಯಾಗಿ ಕಳೆದ ಬಾರಿಯ ಅಧ್ಯಕ್ಷೆ ಶೋಭಾ ಭಟ್ ರವರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಚುನಾವಣಾ ಅಧಿಕಾರಿಯಾಗಿ ತೋಟಗಾರಿಕಾ ಇಲಾಖಾಧಿಕಾರಿ ನಿದೀಶ್ ಕುಮಾರ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.
ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕಾಪು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಯುಸಿ ಶೇಖಬ್ಬ, ಗ್ರಾಮ ಪಂಚಾಯತ್ ಸದಸ್ಯರು, ಉಧ್ಯಮಿ ಹರೀಶ್ ನಾಯಕ್ ಕಾಪು, ಕಾಪು ಕಾಂಗ್ರೆಸ್ ಅಧ್ಯಕ್ಷ ನವೀನನ್ ಚಂದ್ರ ಸುವರ್ಣ, ಶೇಖರ್ ಹೆಜಮಾಡಿ ಸಹಿತ ಗಣ್ಯರು ಶುಭ ಹಾರೈಸಿದರು.