ಇನ್ನಂಜೆ ಗ್ರಾಮ ಪಂಚಾಯತ್ : ಅಧ್ಯಕ್ಷರಾಗಿ ಮಾಲಿನಿ ಶೆಟ್ಟಿ ಮತ್ತು ಉಪಾಧ್ಯಕ್ಷರಾಗಿ ಸುರೇಖಾ ಶೆಟ್ಟಿ ಅವಿರೋಧ ಆಯ್ಕೆ
Posted On:
17-08-2023 05:35PM
ಕಾಪು : ಇನ್ನಂಜೆ ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷರಾಗಿ ಮಾಲಿನಿ ಶೆಟ್ಟಿ ಮತ್ತು ಉಪಾಧ್ಯಕ್ಷರಾಗಿ ಸುರೇಖಾ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.
13 ಸದಸ್ಯ ಬಲದ ಇನ್ನಂಜೆ ಗ್ರಾ.ಪಂ. ನಲ್ಲಿ 9 ಬಿಜೆಪಿ, 3 ಕಾಂಗ್ರೆಸ್, 1 ಪಕ್ಷೇತರ ಸದಸ್ಯರಿದ್ದಾರೆ.
ಅಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು.
ತೋಟಗಾರಿಕಾ ಇಲಾಖೆಯ ಅಧಿಕಾರಿ ವರುಣ್ ಜೆ. ಚುನಾವಣಾಧಿಕಾರಿಯಾಗಿದ್ದು, ಪಿಡಿಒ ಚಂದ್ರಕಲಾ ಸಹ ಚುನಾವಣಾಧಿಕಾರಿಯಾಗಿ ಸಹಕರಿಸಿದ್ದರು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್‌ರವರು ಅಧ್ಯಕ್ಷೆ ಮಾಲಿನಿ ಶೆಟ್ಟಿ ಹಾಗೂ ಉಫಾಧ್ಯಕ್ಷೆ ಸುರೇಖಾ ಶೆಟ್ಟಿಯವರಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭ ಇನ್ನಂಜೆ ಗ್ರಾಪಂ ಸದಸ್ಯರು, ಗ್ರಾಮಸ್ಥರು ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.