ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಪ್ರಸಾದ್ ಶೆಟ್ಟಿ ವಳದೂರು, ಉಪಾಧ್ಯಕ್ಷೆಯಾಗಿ ಮಂಜುಳಾ ಆಚಾರ್ಯ ಆಯ್ಕೆ  

Posted On: 18-08-2023 06:34PM

ಕಾಪು : ಇಲ್ಲಿನ ಮಜೂರು ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ಪ್ರಸಾದ್ ಶೆಟ್ಟಿ ವಳದೂರು ಮತ್ತು ಉಪಾಧ್ಯಕ್ಷರಾಗಿ ಮಂಜುಳಾ ಆಚಾರ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ತೋಟಗಾರಿಕೆ ಇಲಾಖೆ ಅಧಿಕಾರಿ ವರುಣ್ ಜೆ. ಚುನಾವಣಾಧಿಕಾರಿಯಾಗಿದ್ದು, ಪಿಡಿಒ ವಿಲಾಸಿನಿ ಸಹ ಚುನಾವಣಾಧಿಕಾರಿಯಾಗಿ ಸಹಕರಿಸಿದ್ದರು. 13 ಸದಸ್ಯ ಬಲದ ಮಜೂರು ಗ್ರಾ.ಪಂ. ನಲ್ಲಿ 9 ಬಿಜೆಪಿ, 4 ಕಾಂಗ್ರೆಸ್ ಸದಸ್ಯರಿದ್ದಾರೆ.

ಅಧ್ಯಕ್ಷ ಸ್ಥಾನವು ಸಾಮಾನ್ಯ ಪುರುಷ ಮತ್ತು ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಬಿಜೆಪಿ ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಶಿಲ್ಪಾ ಜಿ. ಸುವರ್ಣ, ಮಾಜಿ ತಾ.ಪಂ. ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ಗಂಗಾಧರ್ ಸುವರ್ಣ, ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಗಣೇಶ್ ಶೆಟ್ಟಿ, ಸಂದೀಪ್ ರಾವ್, ನಿಕಟಪೂರ್ವ ಅಧ್ಯಕ್ಷೆ ಶರ್ಮಿಳಾ ಆಚಾರ್ಯ, ಉಪಾಧ್ಯಕ್ಷ ಮಧುಸೂದನ್ ಸಾಲಿಯನ್ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.