ಕಟಪಾಡಿ : ವಿಶ್ವ ಬ್ರಾಹ್ಮಣ ಸಮಾಜದ ಸಂಸ್ಕೃತಿಯ, ಸಂಘಟನೆಯ, ಐಕ್ಯತೆಯ ದ್ಯೋತಕವಾಗಿರುವ ವಿಶ್ವಕರ್ಮ ಧ್ವಜದ ಬಣ್ಣ, ಪ್ರಮಾಣ, ಆಕಾರ, ಲಾಂಛನ, ವಿನ್ಯಾಸದ ಬಗ್ಗೆ ಸಮಾಜದ ಸಂಘಟನೆಗಳಲ್ಲಿ, ಸಮಾಜದ ಸದಸ್ಯರಲ್ಲಿ ಒಮ್ಮತ ಅಭಿಪ್ರಾಯ ಮೂಡಿಸಿ ಸೂಕ್ತ ತೀರ್ಮಾನಗಳನ್ನು ಕೈಗೊಳ್ಳುವ
ನಿಟ್ಟಿನಲ್ಲಿ ಮಹಾಸಂಸ್ಥಾನದ ಕಟಪಾಡಿ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಪ್ರತಿಷ್ಠಾನವು ಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯದಲ್ಲಿ ಸಮಾಜದ ದೇವಸ್ಥಾನಗಳ ಧರ್ಮದರ್ಶಿಗಳು, ಸಂಘಟನೆಗಳ ಪ್ರಮುಖರು, ವೈದಿಕ ಮುಖಂಡರು, ಸಮಾಜದ ಗಣ್ಯರು ಪ್ರಮುಖರ ಪಾಲ್ಗೊಳ್ಳುವಿಕೆಯೊಂದಿಗೆ ಆಗಸ್ಟ್ 20 ರಂದು ಪ್ರಥಮ ಚಿಂತನಾ ಸಭೆ ನಡೆಯಿತು.
ಮಹಾಸಂಸ್ಥಾನದ ಆಸ್ಥಾನ ವಿದ್ವಾಂಸರಾದ ವೇ.ಬ್ರ. ಶ್ರೀ ಶಂಕರಾಚಾರ್ಯ ಗುರುನಾಥಾಚಾರ್ಯ ಕಡ್ಲಾಸ್ಕರ್ ಪಂಡಿತ್ ಹುಬ್ಬಳ್ಳಿ ಇವರು ವಿಶ್ವಕರ್ಮ ಧ್ವಜದ ಬಗ್ಗೆ ಪುರಾಣ ಹಿನ್ನೆಲೆ ಸೇರಿದಂತೆ ವಿವಿಧ ದಾಖಲೆಗಳೊಂದಿಗೆ ವಿಷಯವನ್ನು ಮಂಡಿಸಿದರು.
ಬಂಗ್ರಮಂಜೇಶ್ವರ ಶ್ರೀ ಕಾಳಿಕಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ಬಿ ಎಂ ಯದುನಂದನ ಆಚಾರ್ಯ, ಮಧೂರು ಶ್ರೀ ಕಾಳಿಕಾಂಬಾ ಮಠದ ಅಧ್ಯಕ್ಷ ನ್ಯಾಯವಾದಿ ಕೆ.ಪ್ರಭಾಕರ ಆಚಾರ್ಯ ಕೋಟೆಕಾರು, ಆರಿಕ್ಕಾಡಿ ಕಾರ್ಲೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಅಧ್ಯಕ್ಷ ಜನಾರ್ದನ ಆಚಾರ್ಯ ಆರಿಕ್ಕಾಡಿ, ಪ್ರತಿಷ್ಠಾನದ ಕೋಶಾಧಿಕಾರಿ ಅರವಿಂದ ವೈ. ಆಚಾರ್ಯ ಬೆಳುವಾಯಿ, ಅಸೆಟ್ ಅಧ್ಯಕ್ಷ ಬಿ. ಸೂರ್ಯಕುಮಾರ್ ಹಳೆಯಂಗಡಿ, ಕಾಟುಕುಕ್ಕೆ ವಾಸುದೇವ ಆಚಾರ್ಯ ಕುಂಬಳೆ, ಬಂಬ್ರಾಣ ಯಜ್ಞೇಶ ಆಚಾರ್ಯ ಮಂಗಳೂರು,
ಪುರುಷೋತ್ತಮ ಆಚಾರ್ಯ ಪುತ್ತೂರು,ಅಶೋಕ ಆಚಾರ್ಯ ಪ್ರತಾಪ ನಗರ, ಪೋಳ್ಯ ಉಮೇಶ ಆಚಾರ್ಯ ಪುತ್ತೂರು,ಪುರುಷೋತ್ತಮ ಆಚಾರ್ಯ ಪುತ್ತೂರು,ಕೋಟ ಗಣೇಶ ಆಚಾರ್ಯ, ನಿತ್ಯಾನಂದ ಆಚಾರ್ಯ ಬಂಗ್ರಮಂಜೇಶ್ವರ, ರೂಪೇಶ್ ಆಚಾರ್ಯ ಶಿರ್ವ, ಹಿತೇಶ್ ಆಚಾರ್ಯಾ ಬಂಗ್ರ ಮಂಗೇಶ್ವರ ಪೆರ್ಣೆ ಮಧುಸೂದನ ಆಚಾರ್ಯ ಕಾಸರಗೋಡು, ಗುರುನಾಥ ಆಚಾರ್ಯ ಹುಬ್ಬಳ್ಳಿ, ಗಣೇಶ್ ಆಚಾರ್ಯ ಕೆಮ್ಮಣ್ಣು, ಲೋಲಾಕ್ಷ ಶರ್ಮ ಪಡುಕುತ್ಯಾರು, ಮೌನೇಶ ಶರ್ಮ ಪಡುಕುತ್ಯಾರು ಇವರು ಅಭಿಪ್ರಾಯ ಮಂಡಿಸಿದರು.
ಸಂಚಾಲಕರಾದ ಯೋಗಾಚಾರ್ಯ ಪುಂಡರಿಕಾಕ್ಷ ಬೆಳ್ಳೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ ಬಿ ಆಚಾರ್ ಕಂಬಾರು ಕಾರ್ಯಕ್ರಮ ನಿರೂಪಿಸಿದರು.