ಕಟಪಾಡಿ ಗ್ರಾಮ ಪಂಚಾಯತ್ : ಅಧ್ಯಕ್ಷರಾಗಿ ಪ್ರಭಾ ಶೆಟ್ಟಿ, ಉಪಾಧ್ಯಕ್ಷರಾಗಿ ಸುಗುಣ ಆಯ್ಕೆ
Posted On:
22-08-2023 07:22PM
ಕಟಪಾಡಿ : ಇಲ್ಲಿನ ಗ್ರಾಮ ಪಂಚಾಯತಿಯ ಎರಡನೇ ಸಾಲಿನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಗೆ ಮಂಗಳವಾರ ಚುನಾವಣೆ ನಡೆದಿದ್ದು, ಕಾಂಗ್ರೆಸ್ ಬೆಂಬಲಿತ ಪ್ರಭಾ ಶೆಟ್ಟಿ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಸುಗುಣ ಆಯ್ಕೆ ಆಗಿದ್ದಾರೆ.
ಕಟಪಾಡಿ ಗ್ರಾಮ ಪಂಚಾಯತಿಯಲ್ಲಿ 26 ಸದಸ್ಯರ ಬಲವಿದ್ದು, ಬಿಜೆಪಿ ಬೆಂಬಲಿತರಾಗಿ ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿ ಅಶೋಕ್ ರಾವ್ ಸ್ಪರ್ಧಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತೆ ಕವಿತಾ ಸುವರ್ಣ ಸ್ಫರ್ಧಿಸಿದ್ದರು.
14 ಮತಗಳನ್ನು ಪಡೆದ ಪ್ರಭಾ ಶೆಟ್ಟಿ ವಿಜಯಿ ಆಗಿದ್ದಾರೆ. ಅಶೋಕ್ ರಾವ್ ಮತ್ತು ಕವಿತಾ ಸುವರ್ಣ 12 ಮತಗಳನ್ನು ಪಡೆದು ಸೋಲೊಪ್ಪಿಕೊಂಡಿದ್ದಾರೆ.
ಗೆಲುವು ಸಾಧಿಸಿದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಆಶಾ ಕಟಪಾಡಿ, ವಿನಯ ಬಳ್ಳಾಲ್, ಗ್ರಾಮ ಪಂಚಾಯತ್ ಸದಸ್ಯರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಅಭಿನಂದಿಸಿದರು.