ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉಚ್ಚಿಲ : ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ ಸಂಪನ್ನ

Posted On: 25-08-2023 04:36PM

ಉಚ್ಚಿಲ : ಇಲ್ಲಿನ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ವತಿಯಿಂದ ದೇವಳದ ಸಭಾಭವನದಲ್ಲಿ ವರಮಹಾಲಕ್ಷ್ಮಿ ಪೂಜೆ ಶುಕ್ರವಾರ ಸಂಪನ್ನಗೊಂಡಿತು.

ವೇದಮೂರ್ತಿ ಶ್ರೀ ಕೆ ವಿ ರಾಘವೇಂದ್ರ ಉಪಾಧ್ಯಾಯ, ಕೆ ವಿ ವಿಷ್ಣುಮೂರ್ತಿ ಉಪಾಧ್ಯಾಯರವರ ನೇತೃತ್ವದಲ್ಲಿ, ವೇದ ಮೂರ್ತಿ ಶ್ರೀಶ ಭಟ್‌ರವರು ಪೂಜಾ ವಿಧಿ ವಿಧಾನ ನೆರವೇರಿಸಿದರು.

ಈ ಸಂದರ್ಭ ಮೊಗವೀರ ಮುಂದಾಳು ಡಾ. ಜಿ ಶಂಕರ್, ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಗುಂಡು ಬಿ ಅಮೀನ್, ಕ್ಷೇತ್ರಡಳಿತ ಮಂಡಳಿಯ ಅಧ್ಯಕ್ಷ ವಾಸುದೇವ ಸಾಲ್ಯಾನ್, ಮಹಾಜನ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಉಷಾರಾಣಿ ಬೋಳೂರು, ದೇವಳದ ಪ್ರಧಾನ ಪ್ರಬಂಧಕ ಸತೀಶ್‌ ಅಮೀನ್ ಹಾಗೂ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಉಪಸ್ಥಿತರಿದ್ದರು.