ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಶಿರ್ವ : ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಶಿರ್ವ ಶಾಖೆಯಿಂದ ವಿಶೇಷ ಶಾಲೆಗೆ ಅಗತ್ಯ ವಸ್ತುಗಳ ವಿತರಣೆ

Posted On: 25-08-2023 09:51PM

ಶಿರ್ವ : ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಲಿ. ಕಾರವಾರ ಇದರ ಶಿರ್ವ ಶಾಖೆಯ ವತಿಯಿಂದ ಮಾನಸ ವಿಶೇಷ ಶಾಲೆ ಪಾಂಬೂರು ಇಲ್ಲಿನ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಕ್ರೈಸ್ತ ಒಕ್ಕೂಟದ ಅಧ್ಯಕ್ಷರಾದ ಪ್ರಶಾಂತ್ ಜತ್ತನ್ನ, ನ್ಯಾಯವಾದಿ ಮೆಲ್ವಿನ್ ಡಿಸೋಜ, ಸಮಾಜ ಸೇವಕರಾದ ಹಸನ್‌ ಇಬ್ರಾಹಿಂ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಪ್ರಶಾಂತ್ ಜತ್ತನ್ನ ಸಂಸ್ಥೆಯ ಸಮಾಜಮುಖಿ ಕಾರ್ಯವನ್ನು ಶ್ಲಾಘಿಸಿ ಮುಗ್ಧ ಮಕ್ಕಳಿಗೆ ಉಡುಗೊರೆ ನೀಡುವ ಮೂಲಕ ದೇವರ ಮೆಚ್ಚುಗೆಗೆ ಪಾತ್ರವೆಂದು ಶುಭ ಹಾರೈಸಿದರು. ಇನ್ನೋರ್ವ ಮುಖ್ಯ ಅತಿಥಿ ಮೆಲ್ವಿನ್ ಡಿಸೋಜ ಮಾತನಾಡಿ ಶಿರ್ವ ಶಾಖೆಯ ಜನಸ್ನೇಹಿ ಸೇವೆಯನ್ನು ಸ್ಮರಿಸುತ್ತಾ ಇನ್ನೂ ಹೆಚ್ಚಿನ ಸಮಾಜಮುಖಿ ಕಾರ್ಯಗಳು ಸಂಸ್ಥೆಯಿಂದ ನಡೆಯಲಿ ಎಂದು ಆಶಿಸಿದರು.

ಈ ವೇಳೆ ಶಾಲಾ ಪ್ರಾಂಶುಪಾಲೆ ಸಿ| ಅನ್ಸಿಲ್ಲಾ, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ಶಿರ್ವ ಶಾಖೆಯ ತೃಪ್ತಿ, ಹರ್ಷಿತಾ, ಬೆಸ್ಸಿ, ಮನೀಶ್ ರವರು ಸಹಕರಿಸಿದರು. ಮಾನಸ ಸಂಸ್ಥೆಯ ಅಧ್ಯಕ್ಷರಾದ ಹೆನ್ರಿ ಮೆನೆಜಸ್ ಸ್ವಾಗತಿಸಿದರು. ಶಾಖಾ ಪ್ರಬಂಧಕಿ ಪ್ರಮೀಳಾ ಲೋಬೋ ಪ್ರಸ್ತಾವಿಕ ನುಡಿಗಳನ್ನಾಡಿದರು. ಮಾನಸ ಸಂಸ್ಥೆಯ ಶಿಕ್ಷಕಿ ಶಶಿಕಲ ಕಾರ್ಯಕ್ರಮ ನಿರೂಪಿಸಿದರು. ಶಾಖೆಯ ಸಹಾಯಕ ವ್ಯವಸ್ಥಾಪಕರಾದ ವಿಲ್ಸನ್ ಪ್ರಿತೇಶ್ ವಂದಿಸಿದರು.