ಕಾಪು : ಇಲ್ಲಿನ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ, ಕಟಪಾಡಿ ಸಿಎ ಬ್ಯಾಂಕ್ ನಿರ್ದೇಶಕ, ಕಟಪಾಡಿ ಹಾಲು ಉತ್ಪಾದಕರ ಸಹಕಾರ ಸಂಘ (ನಿ) ಇದರ ಅಧ್ಯಕ್ಷ, ಕಟಪಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಲಿ ಸದಸ್ಯರೂ ಆದ ಅಶೋಕ್ ರಾವ್ ಹಾಗೂ ಕಟಪಾಡಿ ಗ್ರಾಮಪಂಚಾಯತ್ ಸದಸ್ಯರಾದ ಈಶ್ವರ ಕಟಪಾಡಿ ಇಂದು ಕಾಪು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಶಾಲು ಹೊದಿಸಿ ಪಕ್ಷದ ಧ್ವಜ ಕೊಟ್ಟು ಪಕ್ಷಕ್ಕೆ ಬರಮಾಡಿಕೊಂಡು ಶುಭ ಹಾರೈಸಿದರು.
ಸೇರ್ಪಡೆಗೊಂಡ ಬಳಿಕ ಮಾತನಾಡಿದ ಅಶೋಕ್ ರಾವ್ ಕಟಪಾಡಿಯಲ್ಲಿ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಬಿಜೆಪಿಗೆ ಶಕ್ತಿತುಂಬುವ ಕೆಲಸ ಮಾಡಿ ಪಕ್ಷದ ಗೌರವ ಹೆಚ್ಚಿಸುವ ಕೆಲಸ ಮಾಡುವೆ ಎಂದರು.
ಈ ಸಂದರ್ಭ ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಶಕ್ತಿ ಕೇಂದ್ರ ಪ್ರಮುಖ್ ನಿತಿನ್ ಸೇರಿಗಾರ, ಕಟಪಾಡಿಯ ಪ್ರಮುಖರಾದ ಗಂಗಾಧರ್ ಸುವರ್ಣ, ಮುರಳೀಧರ ಪೈ, ಶಿಲ್ಪಾ ಜಿ ಸುವರ್ಣ, ಸುಭಾಸ್ ಬಲ್ಲಾಳ್, ಗುರುಕ್ರಪಾ ರಾವ್, ಕವಿತಾ ಸುವರ್ಣ, ಶ್ರೀನಿವಾಸ ಕಿಣಿ, ಪವಿತ್ರ ಶೆಟ್ಟಿ, ರಘುಪತಿ ಆಚಾರ್ಯ, ಬೂತ್ ಅಧ್ಯಕ್ಷ ಕರುಣಾಕರ ಪೂಜಾರಿ, ನಿತೇಶ್ ದೇವಾಡಿಗ, ಕಟಪಾಡಿ ಪಂಚಾಯತ್ ಸದಸ್ಯರುಗಳು, ಅರುಣ್ ಶೆಟ್ಟಿ ಪಾದೂರು, ಅನಿಲ್ ಕುಮಾರ್, ನವೀನ್ ಎಸ್ ಕೆ, ರತ್ನಾಕರ ಶೆಟ್ಟಿ, ಶೈಲೇಶ್ ಅಮೀನ್, ಸಂದೀಪ್ ಶೆಟ್ಟಿ, ಸಂದೀಪ್ ರಾವ್ ಮತ್ತಿತರರು ಉಪಸ್ಥಿತರಿದ್ದರು.